ಕಾಂಗ್ರೆಸ್ ಮುಖಂಡರಿಂದ ನೆರೆ ಸಂತ್ರಸ್ತರ ಅಹವಾಲು ಆಲಿಕೆ

ಕುಶಾಲನಗರ: ಕುಶಾಲನಗರದ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಕಾಂಗ್ರೆಸ್ ಪ್ರಮುಖರ ತಂಡ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಾಜಿ ಸಚಿವರಾದ ಎಚ್.ಸಿ. ಮಹದೇವಪ್ಪ, ಸಿ.ಎಚ್.ವಿಜಯಶಂಕರ್, ಮಾಜಿ ಸಂಸದ ಧ್ರುವನಾರಾಯಣ, ಶಾಸಕ ಯತೀಂದ್ರ, ಎಂಎಲ್ಸಿ ವೀಣಾ ಅಚ್ಚಯ್ಯ ತಂಡ ಕುಶಾಲನಗರದ ದಂಡಿನಪೇಟೆ, ವಿವೇಕಾನಂದ ಬಡಾವಣೆಗೆ ತೆರಳಿ ನೆರೆ ಸಂತ್ರಸ್ತರ ಕುಟುಂಬದವರ ಅಹವಾಲು ಆಲಿಸಿದರು. ಕುಸಿದ ಮನೆಗಳನ್ನು ಪರಿಶೀಲಿಸಿ ಅಧಿಕಾರಿಗಳಿಂದ ನಷ್ಟ ಮತ್ತು ಪರಿಹಾರದ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಮಾತನಾಡಿ, ನದಿ ತಟದಲ್ಲಿರುವ ಮುಳುಗಡೆ ಪ್ರದೇಶದ ಜನರಿಗೆ ಪರಿಹಾರ ನೀಡುವ ಜತೆಗೆ ಸರ್ಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಸಮರ್ಪಕವಾಗಿ ಪರಿಹಾರ ಸಂತ್ರಸ್ತರಿಗೆ ತಲುಪುವಂತೆ ಸ್ಥಳೀಯ ಆಡಳಿತ ನಿಗಾವಹಿಸಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್‌ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ.ಚಂದ್ರಕಲಾ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಮಾಜಿ ಅಧ್ಯಕ್ಷ ಎಸ್.ಎನ್.ನರಸಿಂಹಮೂರ್ತಿ, ಮಂಜುನಾಥ್ ಗುಂಡುರಾವ್, ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪಪಂ ಸದಸ್ಯರಾದ ಖಲೀಮುಲ್ಲಾ, ಪ್ರಮೋದ್ ಮುತ್ತಪ್ಪ, ಜಯಲಕ್ಷ್ಮೀ, ಜಯಲಕ್ಷಮ್ಮ ಮತ್ತಿತರರಿದ್ದರು.

Leave a Reply

Your email address will not be published. Required fields are marked *