More

    ನೆರೆ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಶೀಘ್ರ

    ಎಂ.ಕೆ.ಹುಬ್ಬಳ್ಳಿ: ಮಲಪ್ರಭಾ ನದಿ ಪ್ರವಾಹಕ್ಕೆ ತುತ್ತಾಗುತ್ತಿರುವ ಚನ್ನಮ್ಮನ ಕಿತ್ತೂರು ತಾಲೂಕಿನ ಹಳೇಹುಣಶೀಕಟ್ಟಿ ಗ್ರಾಮದ ಮಲಪ್ರಭಾ ನದಿ ತೀರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು.

    ನಂತರ ಮಾತನಾಡಿ, ಮಲಪ್ರಭಾ ನದಿಯಲ್ಲಿ ಪ್ರವಾಹ ಉಂಟಾದಾಗೊಮ್ಮೆ ತಮ್ಮ ಮನೆಗಳು ಜಲಾವೃತಗೊಳ್ಳುತ್ತಿವೆ. ತಮಗೆ ಪುನರ್ವಸತಿ ಕಲ್ಪಿಸಬೇಕೆಂದು ಇಲ್ಲಿನ ನಿವಾಸಿಗಳು ಹಾಗೂ ರೈತ ಮುಖಂಡರು ಮನವಿ ಮಾಡಿದ್ದರು. ಹಾಗಾಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೇನೆ. ಸಂಬಂಧಿಸಿದ ಅಧಿಕಾರಿಗಳಿಗೆ ಸರ್ವೇ ಮಾಡಲು ಸೂಚಿಸಲಾಗಿದೆ. ನಂತರ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಮಲಪ್ರಭಾ ನದಿ ಪ್ರವಾಹಕ್ಕೆ ಹುಣಶೀಕಟ್ಟಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿರುವ ಮನೆಗಳು ಜಲಾವೃತಗೊಳ್ಳುತ್ತಿವೆ. ಹಾಗಾಗಿ ಗ್ರಾಮದ ಎತ್ತರ ಪ್ರದೇಶದಲ್ಲಿ ಖಾಲಿ ಇರುವ ಸರ್ಕಾರದ 8.8 ಎಕರೆ ಜಾಗೆಯಲ್ಲಿ ಪುನರ್ವಸತಿ ಕಲ್ಪಿಸುವಂತೆ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಫಂದಿಸಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಆದಷ್ಟು ಶೀಘ್ರ ನಮಗೆ ಪುನರ್ವಸತಿ ಕಲ್ಪಿಸಬೇಕೆಂದು ರೈತ ಸಂಘಟನೆಯ ತಾಲೂಕಾಧ್ಯಕ್ಷ ಮೌಲಾಲಿ ಮಕಾನದಾರ್ ಆಗ್ರಹಿಸಿದರು.

    ತಹಸೀಲ್ದಾರ್ ಪ್ರವೀಣ ಜೈನ್, ಚೂನಪ್ಪ ಪೂಜಾರಿ, ರಾಘವೇಂದ್ರ ನಾಯ್ಕ, ಜಯಶ್ರೀ ಗುರನ್ನವರ, ಅಶೋಕ ಯಮಕನಮರ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಂಗಯ್ಯ ಪೂಜಾರ, ಪ್ರಕಾಶ ನಾಯ್ಕ, ರೈತರು, ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts