More

    ನೆರೆ ಸಂತ್ರಸ್ತರ ಸಮಸ್ಯೆ ಶೀಘ್ರ ಪರಿಹರಿಸಿ

    ಮೂಡಲಗಿ: ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಮನೆ ನೀಡಲು ಇರುವ ತಾಂತ್ರಿಕ ದೋಷವನ್ನು ನಿವಾರಿಸಬೇಕು. ಮಾರ್ಚ್ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂತ್ರಸ್ತರ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.

    ಪ್ರವಾಹ ಮತ್ತು ನಿರಂತರ ಮಳೆಯಿಂದ ಅರಬಾವಿ ಕ್ಷೇತ್ರದ 29 ಗ್ರಾಮಗಳ ಒಟ್ಟು 1,887 ಮನೆಗಳ ಪೈಕಿ 1,495 ಮನೆಗಳಿಗೆ ಈಗಾಗಲೇ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಇನ್ನುಳಿದ 392 ಮನೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಬಾಕಿ ಇದೆ. ಮಾರ್ಚ್ ತಿಂಗಳೊಳಗೆ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

    ವ್ಯಾಕ್ಸಿನ್ ಪಡೆಯಲು ಹೆದರಬೇಡಿ: ಮೊದಲ ಹಂತದ ಲಸಿಕೆಯಲ್ಲಿ ಗೋಕಾಕ ತಾಲೂಕಿಗೆ 1,328 ಲಸಿಕೆಗಳು ಬಂದಿದ್ದು, ಈಗಾಗಲೇ ಸಾವಿರಕ್ಕೂ ಅಧಿಕ ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಲಸಿಕೆ ಪಡೆಯಲು ಹಿಂಜರಿಯಬೇಡಿ. ವ್ಯಾಕ್ಸಿನ್‌ದಿಂದ ಯಾವುದೇ ಆರೋಗ್ಯ ಸಮಸ್ಯೆ ಉದ್ಭವಿಸುವುದಿಲ್ಲವೆಂದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿವೆ ಎಂದು ಶಾಸಕ ಬಾಲಚಂದ್ರ ತಿಳಿಸಿದರು.

    ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬೆಳಗಾವಿ ಜಿಪಂ ಉಪ ಕಾರ್ಯದರ್ಶಿ ಡಿ.ಎಂ. ಜಕ್ಕಪ್ಪಗೋಳ, ತಹಸೀಲ್ದಾರ್ ಡಿ.ಜೆ. ಮಹಾತ, ತಾಪಂ ಇಒ ಕಾರ್ಯನಿರ್ವಾಹಕ ಅಧಿಕಾರಿ(ಪ್ರ) ಬಸವರಾಜ ಹೆಗ್ಗನಾಯಿಕ, ಸಿಪಿಐ ವೆಂಕಟೇಶ ಮುರನಾಳ, ಬಿಇಒ ಅಜಿತ ಮನ್ನಿಕೇರಿ, ತಾಲೂಕಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts