ಬೆಳಗಾವಿ: ಗ್ರಾಮೀಣ ಕ್ಷೇತ್ರದ ಪ್ರವಾಹಪೀಡಿತ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳ್ಕರ್ ಸಂತ್ರಸ್ತರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ನೀಡಿದರು.
ಬೆಳಗಾವಿ ತಾಲೂಕಿನ ದೇಸೂರ ಗ್ರಾಮಕ್ಕೆ ಭೇಟಿ ನೀಡಿ, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳನ್ನು ವೀಕ್ಷಿಸಿ, ಸಂತ್ರಸ್ತರಿಗೆ ಲಕ್ಷ್ಮೀ ತಾಯಿ ಫೌಂಡೇಷನ್‌ನಿಂದ ಆರ್ಥಿಕವಾಗಿ ಸಹಾಯ ಮಾಡಿದರು. ಪ್ರವಾಹ ಪೀಡಿತರು ಆತಂಕಪಡಬೇಕಾಗಿಲ್ಲ. ಅವರಿಗೆ ಎಲ್ಲ ನೆರವು ನೀಡಲಾಗುವುದು. ಅವರ ಕಷ್ಟಗಳಿಗೆ ವೈಯಕ್ತಿಕವಾಗಿ ಹಾಗೂ ಸರ್ಕಾರದಿಂದ ಸಹಾಯ ಮಾಡಲಾಗುವುದು ಎಂದು ಭರವಸೆ ನೀಡಿದರು. ಗ್ರಾಪಂ ಸದಸ್ಯರು, ಗ್ರಾಮದ ಜನರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.