More

    ವಿಶೇಷ ತ್ವರಿತ ನ್ಯಾಯಾಲಯ ಸ್ಥಾಪನೆ ಬೇಡಿಕೆ ಪರಿಶೀಲನೆ: ಸಚಿವೆ ಹೆಬ್ಬಾಳ್ಕರ್

    ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ನೇಜಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕುಟುಂಬಕ್ಕೆ ನ್ಯಾಯದೊರಕಿಸುವ ನಿಟ್ಟಿನಲ್ಲಿ ವಿಶೇಷ ತ್ವರಿತ ನ್ಯಾಯಾಲಯ ಸ್ಥಾಪನೆ ಬೇಡಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಎಲ್ಲಾ ವ್ಯವಸ್ಥೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್​ ಹೇಳಿದರು.

    ಶುಕ್ರವಾರ ನೇಜಾರಿನ ತೃಪ್ತಿನಗರದಲ್ಲಿ ಸಂತ್ರಸ್ತ ಕುಟುಂವನ್ನು ಭೇಟಿ ಮಾಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಆರೋಪಿ ಅಮಾನುಷ ರಾಕ್ಷಸಿಕೃತ್ಯ ನಡೆಸಿದ್ದಾನೆ. ಆರೋಪಿ ಸೈಕೋ ರೀತಿಯಲ್ಲಿ ವರ್ತಿಸಿದ್ದಾನೆ. 20 ನಿಮಿಷದಲ್ಲಿ ಕೃತ್ಯವೆಸಗಿದ ಆತ ವಿಕೃತಿಮೆರೆದಿದ್ದಾನೆ. ಫಾಸ್ಟ್​ ಟ್ರ್ಯಾಕ್​ ನ್ಯಾಯಾಲಯದ ಮೂಲಕ ತನಿಖೆಗೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿಸಲಾಗುವುದು ಎಂದರು.

    ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್​ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇವೆ. ಉಡುಪಿ ಜಿಲ್ಲೆ ಶಾಂತಿ ಪ್ರಿಯ ಜಿಲ್ಲೆ, ಇಂತಹ ಜಿಲ್ಲೆಯಲ್ಲಿ ಹೀಗಾಗಬಾರದಿತ್ತು. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತೇವೆ ಎಂದರು.

    ಮೃತರ ಕುಟುಂಬದ ಜೊತೆ ಸರ್ಕಾರವಿದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ನಾನು ಬೆಳಗಾವಿಯಲ್ಲಿದ್ದರೂ ಸಂತ್ರಸ್ತ ಕುಟುಂಬದ ಜೊತೆಗೆ, ಜಿಲ್ಲಾಧಿಕಾರಿ ಹಾಗೂ ಪೊಲೀಸ್​ ವರಿಷ್ಠ್ಟರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಮೃತ ಮಹಿಳೆಯ ಸಹೋದರರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೆ ಎಂದು ಸಚಿವರು ಹೇಳಿದರು.

    ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್​ ವರಿಷ್ಠ್ಠಾಧಿಕಾರಿ ಡಾ.ಕೆ.ಅರುಣ್​, ಜಿಲ್ಲಾ ಪಂಚಾಯಿತಿ ಸಿಇಒ ಪ್ರಸನ್ನ ಮೊದಲಾದವರು ಉಪಸ್ಥಿತರಿದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts