More

    ಜೆಡಿಎಸ್‌ನ ಪರಾಜಿತ ಅಭ್ಯರ್ಥಿ ಡಾ.ಕೆ.ಶ್ರೀನಿವಾಸಮೂರ್ತಿ ಹೇಳಿಕೆ

    ಜೆಡಿಎಸ್‌ನ ಪರಾಜಿತ ಅಭ್ಯರ್ಥಿ ಡಾ.ಕೆ.ಶ್ರೀನಿವಾಸಮೂರ್ತಿ ಹೇಳಿಕೆ

    ವಿಜಯವಾಣಿ ಸುದ್ದಿಜಾಲ ನೆಲಮಂಗಲ
    ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ಕ್ಷೇತ್ರ ತೊರೆಯುವುದಿಲ್ಲ, ಕ್ಷೇತ್ರದ ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ. ಮುಂಬರುವ ಎಲ್ಲ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಶ್ರಮಿಸುತ್ತೇನೆ ಎಂದು ಜೆಡಿಎಸ್‌ನ ಪರಾಜಿತ ಅಭ್ಯರ್ಥಿ ಡಾ.ಕೆ.ಶ್ರೀನಿವಾಸಮೂರ್ತಿ ಹೇಳಿದರು.
    ನಗರದ ಎಂವಿಎಂ ಸಮುದಾಯ ಭವನದಲ್ಲಿ ಜೆಡಿಎಸ್‌ನಿಂದ ಆಯೋಜಿಸಿದ್ದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದರು.
    10 ವರ್ಷಗಳಿಂದಲೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಆಗ ರಾಜ್ಯದಲ್ಲಿ ಜೆಡಿಎಸ್ ಅಧಿಕಾರದಲ್ಲಿ ಇರಲಿಲ್ಲ. 12 ತಿಂಗಳು ಮಾತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಅವರು ನೀಡಿದ್ದ ಅನುದಾನವನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದುಕೊಂಡಿದೆ. ನನ್ನ ಅಧಿಕಾರ ಅವಧಿಯಲ್ಲಿ ಯಾವುದೇ ರೀತಿ ತಲೆ ತಗ್ಗಿಸುವಂತಹ ಕೆಲಸ ಮಾಡಿಲ್ಲ. ಕೆಲ ಮುಖಂಡರ ಕುತಂತ್ರದಿಂದಾಗಿ ಸೋಲು ಅನುಭವಿಸಬೇಕಾಯಿತು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮೂಲಕ ಮತ್ತೆ ಪಕ್ಷ ಕಟ್ಟೋಣ ಎಂದರು.
    ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವ ಅಗತ್ಯವಿದೆ. ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಬೇಕು ಎಂದರು.

    ದ್ವೇಷದ ರಾಜಕಾರಣ ಆರಂಭ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ 4 ದಿನದಲ್ಲೇ ತಾಲೂಕಿನಲ್ಲಿ ದ್ವೇಷದ ರಾಜಕೀಯ ಆರಂಭಿಸಿದ್ದಾರೆ. ಕೋಟ್ಯಂತರ ಹಣ ಹೂಡಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಕೊಂಡುಕೊಂಡಿದ್ದಾರೆ. ಭೂಮಿ ಮೇಲೆ ಮನುಷ್ಯನಿಗೇ ಗ್ಯಾರಂಟಿ ಇಲ್ಲದಿರುವಾಗ ಅವರು ನೀಡುವ ಗ್ಯಾರಂಟಿಗಳು ಯಾವ ಲೆಕ್ಕ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ ಆರೋಪಿಸಿದರು.
    ಪ್ರಚಾರ ಸಮಿತಿ ಸದಸ್ಯ ಡಾ.ಎಲ್.ಕೃಷ್ಣಮೂರ್ತಿ, ತಾಲೂಕು ಕಾರ್ಯಾಧ್ಯಕ್ಷ ಬೂದಿಹಾಳ್ ರಾಜು, ಉಪಾಧ್ಯಕ್ಷ ಹನುಮಂತರಾಜು, ಸೋಲೂರು ಹೋಬಳಿ ಅಧ್ಯಕ್ಷ ಶಿವರುದ್ರಪ್ಪ, ಸೋಂಪುರ ಹೋಬಳಿ ಅಧ್ಯಕ್ಷ ಮೋಹನ್‌ಕುಮಾರ್, ಕಸಬಾ ಹೋಬಳಿ ಅಧ್ಯಕ್ಷ ಕೆಂಪರಾಜು, ನಗರಸಭೆ ಸದಸ್ಯ ಎನ್.ಗಣೇಶ್, ಸದಸ್ಯ ಕೆ.ಎಂ.ಶಿವಕುಮಾರ್, ಆಂಜಿನಪ್ಪ, ಸುನೀಲ್ ಮೂಡ್, ನರಸಿಂಹಮೂರ್ತಿ, ಪಾಪಣ್ಣಿ, ಪದ್ಮನಾಭ್ ಇದ್ದರು.

    ಕೋರ್ ಕಮಿಟಿ ರಚನೆ ಕ್ಷೇತ್ರದಾದ್ಯಂತ ಪ್ರತಿ ಹೋಬಳಿ ಕೇಂದ್ರದಲ್ಲೂ 5 ಪ್ರಮುಖ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ರಚನೆ ಮಾಡಲಾಗುವುದು. ಕಮಿಟಿ ಮೂಲಕ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುವುದು. ಬೂತ್ ಮಟ್ಟದಲ್ಲಿ ಸಂಘಟನೆ, ಮುಖಂಡರ ಸಂಘಟನೆ ಸೇರಿದಂತೆ ಪಕ್ಷದಲ್ಲಿನ ವಿವಿಧ ಘಟಕಗಳನ್ನು ರಚನೆ ಮಾಡುವ ಮೂಲಕ ಸಂಘಟನೆ ಮಾಡಲಾಗುವುದು ಎಂದು ಮಾಜಿ ಶಾಸಕರು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts