ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಮಹಾಸಭೆ

kkd_CA-Bank
Published on

ಕೊಕ್ಕಡ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂದ ವಾರ್ಷಿಕ ಮಹಾಸಭೆ ಗುರುವಾರ ಸಂದ ಪ್ರಧಾನ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಉಮೇಶ್​ ಶೆಟ್ಟಿ, ಸಂವು 29 ಕೋಟಿ 82 ಲಕ್ಷ ರೂ. ಠೇವಣಿ ಹೊಂದಿದ್ದು, 79 ಕೋಟಿ 99 ಲಕ್ಷ ರೂ. ಹೊರಬಾಕಿ ಸಾಲ ಹೊಂದಿದೆ. ವರದಿ ವರ್ಷದಲ್ಲಿ ಶೇ.100 ಸಾಲ ವಸೂಲಾತಿಯಾಗಿದೆ. ದಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್​ನ 23&24ನೇ ಸಾಲಿನ ಪ್ರಶಸ್ತಿ ಪಡೆದಿದೆ. 6259 ಸದಸ್ಯರನ್ನು ಹೊಂದಿರುವ ಸಂವು 479. 69 ಕೋಟಿ ರೂ. ವ್ಯವಹಾರ ನಡೆಸಿದ್ದು 1.54ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.10 ಡಿವಿಡೆಂಡ್​ ನೀಡಲಾಗುವುದು ಎಂದರು.

ಸಂದ ಶಿರಾಡಿ ಶಾಖೆಯ ನೂತನ ಕಟ್ಟಡ ಕಲ್ಪತರು ಸಹಕಾರಿ ಸೌಧ ಅ.7ರಂದು ಉದ್ಘಾಟನೆಗೊಳ್ಳಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಮಿನಿ ಎಟಿಎಂ ಉದ್ಘಾಟಿಸಲಾಯಿತು. ಸಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಸುಲೋಚನಾ ಭಟ್​ ಪ್ರಾರ್ಥಿಸಿದರು. ಬಾಲಕೃಷ್ಣ ಬಾಣಜಾಲ್​ ವಂದಿಸಿದರು. ಜಯಾನಂದ ಬಂಟ್ರಿಯಾಲ್​ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ವರದಿ ವಾಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net