More

    ನೆಲ್ಯಹುದಿಕೇರಿ ಗ್ರಾಮ ಸಭೆ ರದ್ದು

    ಸಿದ್ದಾಪುರ: ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆಯಬೇಕಿದ್ದ ಗ್ರಾಮ ಸಭೆಗೆ ಜನರು ಪಾಲ್ಗೊಳ್ಳದ ಕಾರಣ ಕೋರಂ ಕೊರತೆಯಿಂದ ಸಭೆ ರದ್ದು ಮಾಡಲಾಯಿತು.

    ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯಲ್ಲಿ ವಾರ್ಡ್ ಸಭೆಗಳನ್ನು ನಡೆಸಿ ಮಂಗಳವಾರ ಗ್ರಾಮಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಕರಪತ್ರ ಹೊರಡಿಸಿ ಎಲ್ಲ ಇಲಾಖೆ ಅಧಿಕಾರಿಗಳಿಗೆ ಆಹ್ವಾನ ನೀಡಲಾಗಿತ್ತು. ಎಲ್ಲರೂ ನಿಗದಿತ ವೇಳೆಗೆ ಗ್ರಾಪಂಗೆ ಆಗಮಿಸಿದ್ದರು. ಆದರೆ ಸಮಸ್ಯೆ ಹೇಳಿಕೊಳ್ಳಬೇಕಾದ ಜನರೇ ಆಗಮಿಸದ ಕಾರಣ ಸಭೆ ರದ್ದು ಮಾಡಲಾಯಿತು.

    ಈ ಸಂಬಂಧ ಪ್ರತಿಕ್ರಿಯಿಸಿದ ಅಭಿವದ್ಧಿ ಅಧಿಕಾರಿ ನಂಜುಂಡಸ್ವಾಮಿ, ಗ್ರಾಮ ಸಭೆ ಮುಂದೂಡಲಾಗಿದೆ. ಮುಂದಿನ ಗ್ರಾಮ ಸಭೆಗೆ ಮತ್ತೊಮ್ಮೆ ಕರಪತ್ರ ಹಂಚಿಸಿ ಎಲ್ಲ ವ್ಯವಸ್ಥೆಯನ್ನು ಮಾಡಿ ನಂತರ ನಡೆಸುವುದಾಗಿ ತಿಳಿಸಿದರು.

    ಪ್ರತಿಭಟನೆ: ಸಭೆಗೂ ಮುನ್ನ ಸೆಂಟರ್ ಫಾರ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು. ಸಿಐಟಿಯು ಕೊಡಗು ಜಿಲ್ಲಾಧ್ಯಕ್ಷ ಬಿ.ಆರ್.ಭರತ್ ಮಾತನಾಡಿ, ಪಟ್ಟಣದಲ್ಲಿ ಹಲವು ವರ್ಷಗಳಿಂದ ಸಾರ್ವಜನಿಕ ಶೌಚಗೃಹಕ್ಕೆ ಬೇಡಿಕೆ ಇಟ್ಟಿದ್ದು ಆದರೆ, ಗ್ರಾಮ ಪಂಚಾಯಿತಿ ನಿರ್ಲಕ್ಷೃ ವಹಿಸಿದೆ. ಸಂತ್ರಸ್ತರಿಗೆ ನಿವೇಶನ ಹಂಚಿಕೆ, ಕುಡಿಯುವ ನೀರು, ರಸ್ತೆ , ಸೇರಿದಂತೆ ಹಲವು ಮೂಲ ಸೌಕರ್ಯ ಕಲ್ಪಿಸುವಲ್ಲಿ ಗ್ರಾಪಂ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts