More

    ನೇಪಾಳ ವಿಮಾನ ಪತನ: ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ನಿಯಂತ್ರಣ ತಪ್ಪಿದ ವಿಡಿಯೋ ವೈರಲ್​

    ಕಠ್ಮಂಡು: ನೇಪಾಳದ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಯೇತಿ ಏರ್‌ಲೈನ್ಸ್ ಎಟಿಆರ್​-72 ವಿಮಾನ ರನ್​ವೇನಲ್ಲಿ ಪತನಗೊಂಡ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೇರಿದೆ. ಇದೀಗ ಪತನಕ್ಕೂ ಮುನ್ನ ವಿಮಾನ ನಿಯಂತ್ರಣ ಕಳೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ವಿಮಾನದಲ್ಲಿ 64 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಗಳು ಇದ್ದರು. ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನವಾಗಿದೆ. ಸುಮಾರು 45 ಮಂದಿ ಮೃತಪಟ್ಟಿದ್ದಾರೆ ಎಂದು ಕೆಲ ಪ್ರಯಾಣಿಕರು ಹೇಳುತ್ತಿದ್ದಾರೆ. ಆದರೆ, ಇದು ಅಧಿಕೃತವಾಗಿದೆ. ಈವರೆಗೆ 36 ಮಂದಿ ಮೃತಪಟ್ಟಿರುವುದು ದೃಢವಾಗಿದೆ.

    ಕಠ್ಮಂಡುವಿಗೆ ಹೊರಟಿದ್ದ ವಿಮಾನ, ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್​ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿದೆ. ವಿಮಾನ ಪತನದ ಭಯಾನಕ ವಿಡಿಯೋ ವೈರಲ್​ ಆಗಿದ್ದು, ಹಾರಾಟದ ನಡುವೆ ನಿಯಂತ್ರಣ ಕಳೆದುಕೊಂಡ ವಿಮಾನ ಅಲುಗಾಡುತ್ತಾ ಒಂದೇ ಕಡೆ ವಾಲಿಕೊಂಡು ನೆಲಕ್ಕೆ ಅಪ್ಪಳಿಸುತ್ತಿರುವ ದೃಶ್ಯವಿದೆ.

    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಮತ್ತೊಂದು ವಿಡಿಯೋದಲ್ಲಿ ಅಪಘಾತಕ್ಕೀಡಾದ ವಿಮಾನದಿಂದ ಭಾರಿ ಬೆಂಕಿ ಹೊರಬರುತ್ತಿರುವುದನ್ನು ಕಾಣಬಹುದು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. (ಏಜೆನ್ಸೀಸ್​)

    ಭಾರತೀಯರು ಸೇರಿ ಒಟ್ಟು 72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ನೇಪಾಳದಲ್ಲಿ ಪತನ: 36ಕ್ಕೇರಿದ ಸಾವಿನ ಸಂಖ್ಯೆ

    ನೇಪಾಳದಲ್ಲಿ ವಿಮಾನ ಪತನ: 16 ಮಂದಿ ದುರ್ಮರಣ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ

    72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ: ನೇಪಾಳದಲ್ಲಿ ಮಡುಗಟ್ಟಿದ ಆತಂಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts