Monday, 17th December 2018  

Vijayavani

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ-ಆರೋಗ್ಯ ಸಚಿವರ ಉಡಾಫೆ ಹೇಳಿಕೆ ಪ್ರಸ್ತಾಪ-ಪರಿಷತ್​ನಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ        ಶುರುವಾಯ್ತು ಪೆಥಾಯ್ ಪ್ರತಾಪ-ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಅಲೆಗಳ ಅಬ್ಬರ-ಚೆನ್ನೈ ಸೇರಿ ಹಲವೆಡೆ ಭಾರಿ ಮಳೆ ಸಾಧ್ಯತೆ        ಒಂದೇ ರಸ್ತೆ, ಎರಡು ಇಲಾಖೆ ಬಿಲ್-ಭೂಸೇನೆ, ಪಿಡಬ್ಲ್ಯೂಡಿ ಇಲಾಖೆ ಬಿಲ್​​ಗಾಗಿ ಪೈಪೋಟಿ-ಮುಗಿದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಕೈ ಶಾಸಕ        ಇನ್ನೂ ನಿಂತಿಲ್ಲ ‘ವಿಷ’ಪ್ರಸಾದದ ಎಫೆಕ್ಟ್-ಚಿಕಿತ್ಸೆ ಪಡೀತಿರೋ 30 ಜನ್ರ ಸ್ಥಿತಿ ಗಂಭೀರ-ಆರೋಪಿತರ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ        ಇಂದು 3 ರಾಜ್ಯ ಸಿಎಂಗಳ ಪದಗ್ರಹಣ-ರಾಜ್ಯದಿಂದ ಸಿಎಂ ಎಚ್​ಡಿಕೆ, ಸಿದ್ದುಗೆ ವಿಶೇಷ ಆಹ್ವಾನ-ಕೈ ಸಮಾರಂಭದಲ್ಲಿ ತೃತೀಯ ಶಕ್ತಿ ಪ್ರದರ್ಶನ        37ನೇ ವಸಂತಕ್ಕೆ ‘ಉಗ್ರಂ’ ಸ್ಟಾರ್ ಮುರಳಿ-37ನೇ ಬರ್ತಡೇ.. 37 ಕೆಜಿ ಕೇಕ್ ಕಟ್-ಫ್ಯಾನ್ಸ್​​ಗೆ ಭರಾಟೆ ಟೀಸರ್, ಮದಗಜ ಫಸ್ಟ್ ಪೋಸ್ಟರ್ ಗಿಫ್ಟ್       
Breaking News

ಅತ್ಯಾಚಾರ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ನೇಪಾಳ ಸರ್ಕಾರ ಕೈಗೊಂಡಿರುವ ತೀರ್ಮಾನ ಏನು ಗೊತ್ತಾ?

Saturday, 22.09.2018, 10:21 AM       No Comments

ಕಠ್ಮಂಡು: ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಶ್ಲೀಲ ಮತ್ತು ಕಾಮಪ್ರಚೋದಕ ಕಂಟೆಂಟ್​ಗಳ ಪ್ರಕಟಣೆ ಮತ್ತು ಪ್ರಸರಣವನ್ನು ತಡೆಯುವುದಕ್ಕೆ ನೇಪಾಳ ಸರ್ಕಾರ ಮುಂದಾಗಿದೆ.

ಈ ಕುರಿತು ಮಾಹಿತಿ ಮತ್ತು ಸಂವಹನ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದ್ದು, ಅತ್ಯಾಚಾರ ಪ್ರಕರಣ ಹೆಚ್ಚಳಕ್ಕೆ ಅಶ್ಲೀಲ ಮತ್ತು ಕಾಮಪ್ರಚೋದಕ ಕಂಟೆಂಟ್​ಗಳೇ ಕಾರಣ ಎಂದು ಉಲ್ಲೇಖಿಸಿದೆ. “ಕ್ರಿಮಿನಲ್​ ಕೋಡ್​ 2071ನ 121ನೇ ವಿಧಿ ಮತ್ತು ಇತರ ಪ್ರಚಲಿತ ಕಾನೂನುಗಳು ಅಶ್ಲೀಲ ವಿಷಯಗಳ ಉತ್ಪಾದನೆ ಮತ್ತು ಪ್ರಸರಣವನ್ನು ನಿಷೇಧಿಸುತ್ತವೆ. ಹಾಗಾಗಿ ಇಂಥ ವಿಡಿಯೋಗಳನ್ನು ನೇಪಾಳದಲ್ಲಿ ಅಲಭ್ಯಗೊಳಿಸಲು ವೆಬ್​ಸೈಟ್​ಗಳನ್ನು ಸ್ಥಗಿತಗೊಳಿಸಬೇಕು” ಎಂದು ತಿಳಿಸಿದೆ.

ಕಳೆದ ಕೆಲ ವಾರಗಳಿಂದ ನೇಪಾಳದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ.

ನೇಪಾಳ ಸರ್ಕಾರದ ಈ ನಿಲುವಿನ ಬೆನ್ನಲ್ಲೇ ದೇಶದ ದಕ್ಷಿಣ ಭಾಗದಲ್ಲಿ ಶಾಲಾ ಬಾಲಕಿ ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ಇನ್ನೂ ಗುರುತಿಸಲು ಸಾಧ್ಯವಾಗದಿರವುದು ಸರ್ಕಾರದ ವೈಫಲ್ಯ ಎಂಬ ಆಕ್ರೋಶ ವ್ಯಕ್ತವಾಗಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top