More

    ಸಮಾನತೆ ವ್ಯವಸ್ಥೆಗೆ ಸರ್ವೋದಯ ಕಲ್ಪನೆ ಪೂರಕ: ಎಸ್.ಎನ್.ನಾಗರಾಜ

    ಶಿವಮೊಗ್ಗ: ಉಳ್ಳವರು ಮತ್ತು ಬಡವರ ನಡುವಿನ ಅಂತರವನ್ನು ಹೋಗಲಾಡಿಸಿ ಸಮಾಜದಲ್ಲಿ ಸಮಾನತೆ ವ್ಯವಸ್ಥೆ ನಿರ್ಮಾಣಕ್ಕೆ ಸರ್ವೋದಯ ಕಲ್ಪನೆ ಪೂರಕವಾಗಿದೆ ಎಂದು ಎನ್‌ಇಎಸ್(ರಾಷ್ಟ್ರೀಯ ಶಿಕ್ಷಣ ಸಮಿತಿ) ಕಾರ್ಯದರ್ಶಿ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು.
    ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಸೋಮವಾರ ಎನ್‌ಇಎಸ್ ಅಮೃತ ಮಹೋತ್ಸವದ ನಿಮಿತ್ತ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲದ ಸಹಯೋಗದಲ್ಲಿ ಸರ್ವೋದಯ ದಿನಾಚರಣೆ ಮತ್ತು ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸರ್ವೋದಯ ವ್ಯವಸ್ಥೆಯು ಸಾಮಾಜಿಕ ಹಿತದಲ್ಲಿ ವೈಯುಕ್ತಿಕ ಹಿತ ಕಾಣುವ, ಎಲ್ಲ ವೃತ್ತಿಯನ್ನು ಗೌರವಿಸುವ, ಯಾವುದೇ ಸ್ಥಾನದಲ್ಲಿರುವ ವ್ಯಕ್ತಿಯ ಶ್ರಮದಾನದ ಅವಶ್ಯಕತೆಯನ್ನು ಪ್ರತಿಪಾದಿಸುತ್ತದೆ ಎಂದರು.
    ಕೂಡಿಟ್ಟ ಹಣದಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ. ಯಾವಾಗ ಗಳಿಸಿದ ಸಂಪತ್ತು ಸಮಾಜದಲ್ಲಿ ಮರು ಹೂಡಿಕೆಯಾಗುತ್ತಾ ಹೋಗುತ್ತದೆ. ಆಗ ಮಾತ್ರ ಸಾಮಾಜಿಕ ಅಭಿವೃದ್ಧಿ ಸಾಧ್ಯ. ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಪ್ರಾಬಲ್ಯತೆ, ಶೋಷಣೆ, ಅಶಾಂತಿಗೆ ಸಮಾಜದಲ್ಲಿ ಅವಕಾಶವಿಲ್ಲ. ಅವೆಲ್ಲವನ್ನೂ ಹೋಗಲಾಡಿಸಿ ಶಾಂತಿ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಶಿಕ್ಷಣದಿಂದ ಸಾಧ್ಯವಾಗಲಿದೆ. ಪ್ರಸ್ತುತ ದಿನಮಾನಕ್ಕೆ ತಕ್ಕಂತೆ ಗಾಂಧೀಜಿ ಅವರ ಆಶಯದ ಸಾಮಾಜಿಕ ವ್ಯವಸ್ಥೆಯನ್ನು ನಿರ್ಮಾಣ ಮಾಡುವಲ್ಲಿ, ಬೇಕಾದ ದಿಕ್ಸೂಚಿ ನೀಡುವ ಯೋಚನೆಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಯುವ ಸಮೂಹಕ್ಕೆ ನೀಡಬೇಕಿದೆ ಎಂದು ಹೇಳಿದರು.
    ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್‌ನ ಮುಖಂಡ ಸುಮನಸ್ ಕೌಲಗಿ, ಎನ್‌ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಸರ್ವೋದಯ ಮಂಡಲ ರಾಜ್ಯಾಧ್ಯಕ್ಷ ಡಾ. ಎಚ್.ಎಸ್.ಸುರೇಶ್, ಕಾರ್ಯದರ್ಶಿ ಯು.ಚಿ.ದೊಡ್ಡಯ್ಯ, ಜಿಲ್ಲಾಧ್ಯಕ್ಷ ಭಗವಂತರಾವ್, ಪ್ರಾಚಾರ್ಯ ಡಾ. ಎಚ್.ಎಸ್.ನಾಗಭೂಷಣ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts