More

    ರಾಜ್ಯದಲ್ಲಿ 3 ದಿನಗಳ ಕಾಲ ನಿರಂತರ ಮಳೆ ಸಾಧ್ಯತೆ; ಹವಾಮಾನ ಇಲಾಖೆಯ ಎಚ್ಚರಿಕೆ..!

    Weather Update 21-11-2023: ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸುಳಿಗಾಳಿಯ ಪರಿಣಾಮದಿಂದ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.


    ಸುಳಿಗಾಳಿ ಉಂಟಾಗಿರುವುದರ ಪರಿಣಾಮ ರಾಜ್ಯದ ಮೇಲೆ ಹೆಚ್ಚಾಗುವುದಿಲ್ಲ. ಆದರೆ, ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.


    ರಾಜ್ಯದಲ್ಲಿ ಶೇ. 39ರಷ್ಟು ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.31ರಷ್ಟು, ಉತ್ತರ ಒಳನಾಡಿನಲ್ಲಿ ಶೇ.74 ಹಾಗೂ ಮಲೆನಾಡಿನಲ್ಲಿ ಶೇ.17ರಷ್ಟು ಮಳೆ ಕೊರತೆ ಉಂಟಾಗಿದೆ. ಸದ್ಯಕ್ಕೆ ಮಳೆ ಬಿಡುವು ಕೊಟ್ಟಿರುವುದರಿಂದ ಮುಂಗಾರು ಹಂಗಾಮಿನ ಕೊಯ್ಲು ಮಾಡುವಂತಹ ಭತ್ತ, ರಾಗಿ, ಶೇಂಗಾ ಮೊದಲಾದ ಬೆಳೆಗಳಿಗೆ ಅನುಕೂಲವಾಗಿದೆ.


    ನಾಳೆಯ ವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


    ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.


    ಇನ್ನು ಕರಾವಳಿ ಭಾಗದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಒಂದು ದಿನ ಧಾರಾಕಾರ ಮಳೆ ಆಗುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts