More

    ಅಸಿಸ್ಟೆಂಟ್ ಪ್ರೊಫೆಸರ್ ನೇರ ನೇಮಕಾತಿಗೆ NET, SET, SLET ಕಡ್ಡಾಯ: ಯುಜಿಸಿ

    ನವ ದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಅರ್ಹತಾ ಮಾನದಂಡಗಳನ್ನು ಪರಿಷ್ಕರಿಸಿದೆ.

    ಯುಜಿಸಿ ಗೆಜೆಟ್ ಅಧಿಸೂಚನೆಯಂತೆ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್.ಡಿ. ಅಸಿಸ್ಟೆಂಟ್ ಪ್ರೊಫೆಸರ್ ನೇಮಕಾತಿಗೆ ಐಚ್ಛಿಕವಾಗಿರುತ್ತದೆ. NET, SET SLET ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಯ ನೇರ ನೇಮಕಾತಿಗೆ ಕನಿಷ್ಠ ಮಾನದಂಡವಾಗಿದೆ. ಹುದ್ದೆಗೆ ಅರ್ಹ ಅಭ್ಯರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸಲು ಯುಜಿಸಿ ಈ ಪರಿಷ್ಕರಣೆ ಮಾಡಿದೆ.

    ಅಸಿಸ್ಟೆಂಟ್ ಪ್ರೊಫೆಸರ್ ಅರ್ಹತಾ ಮಾನದಂಡ
    ಜುಲೈ 1, 2023 ರಿಂದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ನೇರ ನೇಮಕಾತಿಗೆ ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ NET, SET ಅಥವಾ SLET ವಿದ್ಯಾರ್ಹತೆಯಾಗಿದೆ ಎಂದು ಯುಜಿಸಿ ಅಧ್ಯಕ್ಷ ಎಂ ಜಗದೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
    ಯುಜಿಸಿ ಗೆಜೆಟ್ ಹೇಳುವ ಪ್ರಕಾರ “NET/SET/SLET ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ (HEIs) ಅಸಿಸ್ಟೆಂಟ್ ಪ್ರೊಫೆಸರ್ ನೇರ ನೇಮಕಾತಿಗೆ ಕನಿಷ್ಠ ಮಾನದಂಡವಾಗಿದೆ.” ಇದರರ್ಥ ಜುಲೈ 2023 ರ ನಂತರ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಷ್ಕೃತ ಮಾನದಂಡಗಳನ್ನು ಮಾತ್ರ ಪೂರೈಸಬೇಕಾಗುತ್ತದೆ.

    ಹಳೆಯ ನಿಯಮ ಹೇಗಿತ್ತು?
    ಹಿಂದಿನ ಯುಜಿಸಿ ನಿಯಮಗಳ ಪ್ರಕಾರ ಪಿಎಚ್.ಡಿ. ಪದವಿ ವಿಶ್ವವಿದ್ಯಾನಿಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ಕಡ್ಡಾಯ ಅರ್ಹತೆಯಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts