20.4 C
Bangalore
Monday, December 9, 2019

ನೆತ್ರಕೆರೆ ಕಾಂಕ್ರೀಟ್ ರಸ್ತೆ ಕುಸಿತ ಭೀತಿ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ತಡೆಗೋಡೆ ಪೂರ್ಣಗೊಳಿಸದೆ ಹಾನಿ ಅಪೂರ್ಣ ಕಾಮಗಾರಿಗೆ ಗ್ರಾಮಸ್ಥರ ಆಕ್ರೋಶ

ಪಾಯಿಂಟ್ಸ್
ಪಕ್ಕದ ತೋಟ, ಚರಂಡಿಗೆ ಮಣ್ಣು ಕುಸಿಯುವ ಆತಂಕ
ಕೋಟಿ ರೂಪಾಯಿ ಅನುದಾನ ಪೋಲಾಗಲಿದೆ
ಮಳೆ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳುವ ಅಗತ್ಯ

ದೇವಿಪ್ರಸಾದ್ ಎಂ. ದೇವಂದಬೆಟ್ಟು

ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭ ಅವಸರದಲ್ಲಿ ಆರಂಭಗೊಂಡ ಕಾಮಗಾರಿ ಅರೆಬರೆಯಾಗಿ ಅರ್ಧಕ್ಕೆ ನಿಂತು ಗ್ರಾಮಸ್ಥರಿಗೆ ಪ್ರಯೋಜನಕ್ಕಿಂತ ಆಪತ್ತಾಗುವ ಲಕ್ಷಣ ಗೋಚರಿಸಿದೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಮಧ್ಯಭಾಗದಲ್ಲಿರುವ ನೆತ್ರಕೆರೆಯಿಂದ ದರಿಬಾಗಿಲು ಸಂಪರ್ಕಿಸುವ ಪ್ರಮುಖ ರಸ್ತೆಯ ದುಸ್ಥಿತಿ ಇದು.
ಜೋರು ಮಳೆ ಬಂದರೆ ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿಯ ಮಣ್ಣು, ಕೆಸರು ನೀರೆಲ್ಲಾ ಕೃಷಿಕರ ಫಲವತ್ತಾದ ಜಮೀನಿನಲ್ಲಿ, ಚರಂಡಿಗಳಲ್ಲಿ ತುಂಬಿಕೊಂಡು ಕೃಷಿಭೂಮಿ ಜತೆಗೆ ಕೋಟಿ ರೂಪಾಯಿ ಅನುದಾನದ ರಸ್ತೆಯೂ ಕುಸಿಯುವ ಆತಂಕ ಎದುರಾಗಿದೆ. ಅನಾವೃಷ್ಟಿಯಿಂದ ಸುಟ್ಟುಹೋಗಿರುವ ತೋಟಗಳನ್ನು ಕಂಡು ಮಳೆಗಾಗಿ ಪ್ರಾರ್ಥಿಸುತ್ತಿರುವ ರೈತರ ಮನದಲ್ಲಿ, ಮಳೆಬಂದರೂ ಕೃತಕ ನೆರೆಯಿಂದ ಬೆಳೆಹಾನಿಯಾಗುವ ಆತಂಕ ಎದುರಾಗಿದೆ.
ದಿನಾಲು ಸಾವಿರಾರು ಜನರು ಶಾಲೆ- ಕಾಲೇಜು, ಉದ್ಯೋಗ, ಪಂಚಾಯಿತಿ ಕಚೇರಿ, ದೇವಾಲಯ, ಆಸ್ಪತ್ರೆ, ಸೇರಿದಂತೆ ಪ್ರಮುಖ ಪಟ್ಟಣಕ್ಕೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ.
ಈ ರಸ್ತೆಗೆ ಹೊಳ್ಳರಬೈಲು ಪ್ರದೇಶದಲ್ಲಿ ಚರಂಡಿಗೆ ಮೋರಿ ಅಳವಡಿಸಿರುವ ಗುತ್ತಿಗೆದಾರರು ಮೋರಿ ಪಕ್ಕ ತಡೆಗೋಡೆ ನಿರ್ಮಿಸದೆ, ರಸ್ತೆ ಕೆಲಸವನ್ನೂ ಅರ್ಧಕ್ಕೆ ಸ್ಥಗಿತಗೊಳಿಸಿದ್ದಾರೆ. ಕೆಲವೆಡೆ ರಸ್ತೆಬದಿ ಚರಂಡಿಯೇ ಇಲ್ಲ. ಹೊಳ್ಳರಬೈಲು ಪ್ರದೇಶದಲ್ಲಿ ನಿರ್ಮಿಸಿದ ಕಾಂಕ್ರೀಟ್ ರಸ್ತೆ ಒಡೆದು ಹೋಗಿದ್ದು, ಭೂಕಂಪದ ಪರಿಸ್ಥಿತಿ ನಿರ್ಮಾಣವಾಗಿದೆ. ಜೋರು ಮಳೆಬಂದರೆ ರಸ್ತೆಗೆ ಹಾಕಲಾದ ಮಣ್ಣೆಲ್ಲ ಕಾಂಕ್ರೀಟ್ ಸಹಿತ ಪಕ್ಕದ ತೋಟಕ್ಕೆ ಕುಸಿಯುವ ಭೀತಿ ಉಂಟಾಗಿದೆ. ಅಲ್ಲದೆ ಮಣ್ಣು ಕೊಚ್ಚಿಹೋದರೆ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡು, ಸಾವಿರಾರು ಜನರಿಗೆ ತೊಂದರೆಯಾಗಲಿದೆ. ಕೋಟಿ ಅನುದಾನ ಮಳೆಗೆ ಆಹುತಿಯಾಗುವ ಮುನ್ನ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸಿ, ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ, ಕೃಷಿಕರು ಸೇರಿದಂತೆ ಗ್ರಾಮಸ್ತರ ಆತಂಕವನ್ನು ದೂರಮಾಡಬೇಕಾಗಿ ವಿನಂತಿ.

ಬಾಕ್ಸ್
ಕೋಟಿ ಅನುದಾನದ ರಸ್ತೆ
ಕಳೆದ ಐದಾರು ವರ್ಷಗಳಿಂದ ಇಲ್ಲಿನ ಪ್ರಮುಖ ರಸ್ತೆ ನಡೆದಾಡಲೂ ಸಾಧ್ಯವಾಗದಂತಹ ಸ್ಥಿತಿಗೆ ತಲುಪಿತ್ತು. ಗ್ರಾಮಸ್ಥರು ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿ, ರಸ್ತೆ ದುರಸ್ತಿಗೊಳಿಸದಿದ್ದರೆ ಚುನಾವಣೆ ಬಹಿಷ್ಕರಿಸುವ ಬೆದರಿಕೆ ಒಡ್ಡಿದ್ದರು. ಇದರ ಫಲವಾಗಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಂತೆ ತರಾತುರಿಯಲ್ಲಿ ನಬಾರ್ಡ್ ಯೋಜನೆಯಡಿ ಕೋಟಿ ಅನುದಾನ ಒದಗಿಸುವ ಭರವಸೆ ನೀಡಿ ದರಿಬಾಗಿಲು-ನೆತ್ರಕೆರೆ ರಸ್ತೆಯನ್ನು ದುರಸ್ತಿಗೊಳಿಸಲಾಯಿತು. ನಂತರದ ಬೆಳವಣಿಗೆಯಲ್ಲಿ ಕಾಮಗಾರಿ ಅರ್ಧಕ್ಕೆ ಸ್ಥಗಿತವಾಯಿತು.

ಕೋಟ್ಸ್
ಇದೇ ರಸ್ತೆಯಲ್ಲಿ ಕಳೆದ ಹಲವು ದಿನಗಳಿಂದ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದ್ದು, ಕುಸಿದಿರುವ ರಸ್ತೆಯನ್ನು ಉಳಿಸುವ ನಿಟ್ಟಿನಲ್ಲಿ ಮರಳು ಸಾಗಾಟ ವಾಹನಗಳನ್ನು ತಡೆದಿದ್ದೇವೆ. ಮಳೆಗಾಲಕ್ಕೂ ಮುನ್ನ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಉತ್ತಮ.
ನಾಗರಿಕರು
ಕಳ್ಳಿಗೆ ಗ್ರಾಮ

ಸಮಸ್ಯೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ. ಯಾವುದೇ ಕಾರಣಕ್ಕೂ ಗ್ರಾಮಸ್ಥರಿಗೆ, ಕೃಷಿಕರಿಗೆ ತೊಂದರೆಯಾಗಲು ಬಿಡುವುದಿಲ್ಲ.
ಯು.ರಾಜೇಶ್ ನಾಕ್
ಬಂಟ್ವಾಳ ಶಾಸಕರು

ಫೋಟೋ
ಬಿಟಿಡಬ್ಲುೃ ಮೇ 9 ಕಳ್ಳಿಗೆ ರೋಡ್

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...