ಪದ್ಮಶ್ರೀ ಪುರಸ್ಕೃತ ಡಾ.ಅಶೋಕ್ ಪನಗರಿಯಾ ನಿಧನ

ಜೈಪುರ : ಪ್ರಮುಖ ನರರೋಗತಜ್ಞ ಮತ್ತು ಪದ್ಮಶ್ರೀ ಪುರಸ್ಕೃತರಾಗಿದ್ದ ಡಾ.ಅಶೋಕ್ ಪನಗರಿಯಾ ಅವರು ಕೋವಿಡ್ ನಂತರದ ವೈದ್ಯಕೀಯ ಸಮಸ್ಯೆಗಳಿಂದಾಗಿ ಇಂದು ನಿಧನ ಹೊಂದಿದ್ದಾರೆ. 71 ವರ್ಷ ವಯಸ್ಸಾಗಿದ್ದ ಡಾ. ಪನಗರಿಯಾ ಅವರು ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್​ ಬೆಂಬಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಡಾ.ಪನಗರಿಯಾ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳು ಬರುವ ತಲೆಮಾರುಗಳ ವೈದ್ಯರು ಮತ್ತು ಸಂಶೋಧಕರಿಗೆ ಉಪಯುಕ್ತವಾದುದು ಎಂದಿದ್ದಾರೆ. ಕರೊನಾ ಸಾಂಕ್ರಾಮಿಕದ ಸಮಯದಲ್ಲಿ ಡಾ. ಪನಗರಿಯ … Continue reading ಪದ್ಮಶ್ರೀ ಪುರಸ್ಕೃತ ಡಾ.ಅಶೋಕ್ ಪನಗರಿಯಾ ನಿಧನ