More

    ಸರ್ಕಾರಿ ಬಸ್ ನಿಲ್ದಾಣ ಅಭಿವೃದ್ಧಿಗೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ

    ಮಂಡ್ಯ: ಗ್ರಾಮೀಣ ಭಾಗದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ 10 ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
    ನಗರದ ಬಸ್ ನಿಲ್ದಾಣದಲ್ಲಿ ಮಾತನಾಡಿದ ಅವರು, ಜಿಲ್ಲೆ ಹಾಗೂ ಹೊರ ಜಿಲ್ಲೆ, ರಾಜ್ಯಗಳಿಗೆ ಮಂಡ್ಯ ನಗರದಿಂದ ಸಂಚರಿಸಲು ಇನ್ನೂ 50 ರಿಂದ 100 ಬಸ್‌ಗಳ ಅವಶ್ಯಕತೆ ಇದೆ ಎಂದು ಕೆಎಸ್‌ಆರ್‌ಟಿಸಿ ನಿಗಮಕ್ಕೆ ಮನವಿ ಮಾಡಲಾಗಿದೆ. ಎಲ್ಲೆಲ್ಲಿ ಜನರಿಗೆ ಕೊರತೆ ಇದೆಯೇ ಅಲ್ಲಿಗೆ ಹಂತ ಹಂತವಾಗಿ ಬಸ್‌ಗಳ ಸೇವೆ ಒದಗಿಸಲಾಗುವುದು ಎಂದರು.
    ಮಂಡ್ಯ ಬಸ್ ನಿಲ್ದಾಣದ ವಿಭಾಗವು 2006ರಲ್ಲಿ ಪ್ರಾರಂಭವಾಯಿತು. ವಿಭಾಗವು ಪ್ರಸ್ತುತ 475 ವಾಹನಗಳ ಬಲದಿಂದ ಕಾರ್ಯಾಚರಣೆ ಮಾಡಿ ಪ್ರತಿನಿತ್ಯ 1.65 ಲಕ್ಷ ಕಿ.ಮೀ ಕ್ರಮಿಸಿ 73.09 ಲಕ್ಷ ರೂ ಆದಾಯ ಗಳಿಸುತ್ತಿದೆ. ಮಂಡ್ಯ ಬಸ್ ನಿಲ್ದಾಣಕ್ಕೆ ಬೇಕಿರುವ ಬದಲಾವಣೆಗಳ ಬಗ್ಗೆ ಡಿಪಿಆರ್ ಮಾಡಿ ಸಾರಿಗೆ ಸಚಿವರಿಗೆ ಮನವಿ ಮಾಡಲಾಗುವುದು. ಲೋಕಸಭಾ ಚುನಾವಣೆಯ ನಂತರ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
    ಚೆಸ್ಕಾಂ ಅಧ್ಯಕ್ಷ ರಮೇಶ ಬಂಡಿಸಿದ್ದೇಗೌಡ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts