More

    ಹೊಸದಾಗಿ ಮಂಜೂರಾದ ಈ 176 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಆರಂಭ

    ಬೆಂಗಳೂರು: ರಾಜ್ಯದಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ತರಬೇತಿ ಒದಗಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿರುವ ಮಹತ್ವದ ಪ್ರಸ್ತಾವನೆಯೊಂದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂಬುದಾಗಿ ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.

    ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಸಿಗಬೇಕೆಂಬ ಉದ್ದೇಶದಿಂದ ಪ್ರತಿ ತಾಲೂಕಿಗೆ ಒಬ್ಬರಂತೆ 235 ಕೋಚ್‌ ಹುದ್ದೆಗಳ ಸೃಜನೆಗೆ ತಮ್ಮ ನಿರ್ದೇಶನದಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹಲವು ಸುತ್ತಿನ ಸಭೆ-ಚರ್ಚೆಗಳು ನಡೆದ ಬಳಿಕ ಆರ್ಥಿಕ ಇಲಾಖೆ ಹಳೇ ತಾಲೂಕುಗಳನ್ನು ಪರಿಗಣಿಸಿ 176 ಕೋಚ್ ಕಂ ಸಂಯೋಜಕರ ಹುದ್ದೆಗಳನ್ನು ಮಂಜೂರು ಮಾಡಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

    ಕ್ರೀಡಾ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ತಾಲೂಕುಮಟ್ಟದ ಹುದ್ದೆಗಳನ್ನು ಸೃಜಿಸಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿರುವ ಅವರು ನಮ್ಮ ಸರ್ಕಾರ ಕ್ರೀಡೆಗೆ, ಕ್ರೀಡಾಪಟುಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದೆ ಎಂಬುದಾಗಿ ಹೇಳಿದ್ದಾರೆ.

    ಗ್ರಾಮೀಣ ಪ್ರತಿಭೆಗಳಿಗೂ ಸೂಕ್ತ ತರಬೇತಿ ಹಾಗೂ ಹೆಚ್ಚಿನ ಅವಕಾಶ ಸಿಗಬೇಕು. ಆ ನಿಟ್ಟಿನಲ್ಲಿ ತಾಲೂಕು ಮಟ್ಟದ ಕೋಚ್​ಗಳನ್ನು ನೇಮಕ ಮಾಡಲು ತೀರ್ಮಾನಿಸಿದ್ದು, 176 ಕೋಚ್​​ ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

    ಸೀಟ್​ಬೆಲ್ಟ್​ ಧರಿಸದ್ದಕ್ಕೆ ದಂಡ ದುಪ್ಪಟ್ಟು; ಹೊಸ ಆದೇಶ ಜಾರಿ..

    ‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!

    ಚೇತನ್​ಗೆ ವೃತ್ತಿಮಾತ್ಸರ್ಯ; ಸಿನಿಮಾ ಹಿಟ್​ ಮಾಡಿ ನಟನಾಗಿ ಉಳಿಯುವ ಸಾಮರ್ಥ್ಯವಿಲ್ಲ: ಚಕ್ರವರ್ತಿ ಸೂಲಿಬೆಲೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts