

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್ ಮಂಡನೆ. ಈ ಬಾರಿಯ ಬಜೆಟ್ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದ್ದು, ಮುಂಬುರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ ಮಂಡಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಮಂಡನೆ ಮಾಡಿರುವ ಈ ಬಾರಿಯ ಬಜೆಟ್ನಲ್ಲಿ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ವೈದ್ಯಕೀಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಮೀಸಲಿಟ್ಟಿದ್ದಾರೆ. ಅಂತೆಯೇ ಈ ಬಾರಿಯ ಬಜೆಟ್ನಲ್ಲಿ ಬೊಮ್ಮಾಯಿ ಘೋಷಣೆ ಮಾಡಿರುವ ಹೊಸ ಯೋಜನೆಗಳ ಪಟ್ಟಿ ಇಂತಿವೆ....