More

    ಎರಡೇ ವಾರದಲ್ಲಿ 97 ಸಾವಿರ ಮಕ್ಕಳಲ್ಲಿ ಸೋಂಕು; ಶಾಲೆಗಳ ಮರು ಆರಂಭ ನಿರ್ಧಾರ ಹುಟ್ಟು ಹಾಕಿದೆ ಭಾರಿ ಚರ್ಚೆ

    ನ್ಯೂಯಾರ್ಕ್​: ಶಾಲಾ-ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಪೂರ್ಣ ಪ್ರಮಾಣದ ಪುನರಾರಂಭಕ್ಕೆ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಒಲವು ತೋರುತ್ತಿದ್ದಾರೆ. ಆದರೆ, ಅಲ್ಲಿನ ಪರಿಸ್ಥಿತಿ ಮಾತ್ರ ಬಿಗಡಾಯಿಸುತ್ತಲೇ ಸಾಗಿದೆ.

    ಶಾಲೆಗಳ ಆರಂಭದ ಬಳಿಕ ಜಾರ್ಜಿಯಾದಲ್ಲಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೇ ವಿದ್ಯಾರ್ಥಿಗಳು ಗುಂಪುಗೂಡಿದ್ದ ಚಿತ್ರ ಭಾರಿ ವೈರಲ್​ ಆಗಿತ್ತು. ಜತೆಗೆ ಆ ಶಾಲೆಯ ಹತ್ತಾರು ಮಕ್ಕಳಿಗೆ ಸೋಂಕು ಕಾಣಿಸಿಕೊಂಡು ಮತ್ತಷ್ಟು ಆತಂಕ ಮೂಡಿಸಿತ್ತು.

    ಇದಲ್ಲದೇ, ಇಂಡಿಯಾನಾ ಹಾಗೂ ಮಿಸಿಸಿಪ್ಪಿಗಳಲ್ಲಿ ಶಾಲಾರಂಭದ ಮೊದಲ ದಿನವೇ ವಿದ್ಯಾಥಿಗಳಲ್ಲಿ ಕೋವಿಡ್​ ಕಾಣಿಸಿಕೊಂಡಿತ್ತು. ಇದು ಮಕ್ಕಳ ಸುರಕ್ಷತೆ ಬಗ್ಗೆ ಚರ್ಚೆಗಳನ್ನು ಹುಟ್ಟು ಹಾಕಿದೆ.

    ಇದನ್ನೂ ಓದಿ; ರಷ್ಯಾದಲ್ಲಿ ನೋಂದಣಿಯಾಯ್ತು ವಿಶ್ವದ ಪ್ರಪ್ರಥಮ ಕರೊನಾ ಲಸಿಕೆ; ಅಧ್ಯಕ್ಷ ಪುಟಿನ್​ ಮಗಳಿಗೆ ಚುಚ್ಚುಮದ್ದು ಪ್ರಯೋಗ 

    ಇನ್ನೊಂದೆಡೆ, ಮಕ್ಕಳ ತಜ್ಞರು ಹೇಳುವ ಪ್ರಕಾರ ಜುಲೈನ ಕೊನೆಯ ಎರಡು ವಾರದಲ್ಲಿ 97 ಸಾವಿರಕ್ಕೂ ಅಧಿಕ ಮಕ್ಕಳು ಕೋವಿಡ್​ ಪರೀಕ್ಷೆಯಲ್ಲಿ ಪಾಸಿಟಿವ್​ ಆಗಿದ್ದಾರೆ ಎಂದು ವರದಿಯಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಶಾಲೆ ಪುನಾರಂಭದ ನಿರ್ಧಾರ ಭಾರಿ ಚರ್ಚೆ ಹುಟ್ಟು ಹಾಕಿದೆ.

    ಸದ್ಯ ಅಮೆರಿಕದಲ್ಲಿ 51 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದರೆ, 1.63 ಲಕ್ಷ ಜನರು ಮೃತಪಟ್ಟಿದ್ದಾರೆ. ಕೇವಲ 16 ಲಕ್ಷ ಜನರು ಚೇತರಿಸಿಕೊಂಡಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3.60 ಲಕ್ಷ ಆಗಿದೆ.

    ಸೆ.1ರಿಂದ ಶಾಲಾ- ಕಾಲೇಜು ಆರಂಭ ಪ್ರಕ್ರಿಯೆ; ಅರ್ಧದಷ್ಟು ಮಕ್ಕಳು, ಶಿಕ್ಷಕರಿಗಷ್ಟೇ ಅವಕಾಶ; ಹೀಗಿರಲಿದೆ ಮಾರ್ಗಸೂಚಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts