More

    ಲಾಕ್​ಡೌನ್ ನಡುವೆಯೂ ಹೊಸ ಕೆಲಸ ಗಿಟ್ಟಿಸಿಕೊಂಡ ಅದೃಷ್ಟಶಾಲಿಗಳಿವರು…!

    ನವದೆಹಲಿ: ಕರೊನಾ ಸಂಕಷ್ಟದಿಂದಾಗಿ ದೇಶದಲ್ಲಿ ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದಾರೆ ಎನ್ನುವುದು ನಿಜ. ಆದರೆ, ಇದೇ ಅವಧಿಯಲ್ಲಿ ಲಕ್ಷಾಂತರ ಜನರು ಹೊಸದಾಗಿ ಉದ್ಯೋಗ ಪಡೆದುಕೊಂಡಿದ್ದಾರೆ ಎನ್ನುವುದು ಕೂಡ ಅಷ್ಟೇ ಸತ್ಯ.

    ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ ನೀಡಿರುವ ಅಂಕಿ-ಸಂಖ್ಯೆಗಳನ್ನು ಗಮನಿಸಿದಲ್ಲಿ ಮೊದಲ ತ್ರೈಮಾಸಿಕದಲ್ಲಿ ಹೊಸದಾಗಿ ಪಿಎಫ್​ ಖಾತೆ ತೆರೆದವರ ಸಂಖ್ಯೆಯಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡು ಬಂದಿದೆ.

    ಇದನ್ನೂ ಓದಿ; ವಾಹನ ಸವಾರರಿಗೆ ಶುಭ ಸುದ್ದಿ; ಡಿ.31ರವರೆಗೂ ಲೈಸೆನ್ಸ್​, ದಾಖಲೆಗಳ ಮಾನ್ಯತಾ ಅವಧಿ ವಿಸ್ತರಣೆ 

    ಕೇಂದ್ರ ಕಾರ್ಮಿಕ ಸಚಿವಾಲಯ ಬಿಡುಗಡೆ ಮಾಡಿರುವ ವಿವರಗಳನ್ನು ಗಮನಿಸುವುದಾದರೆ, ಪ್ರಸಕ್ತ ಶೈಕ್ಷಣಿಕ ವರ್ಷದ ಏಪ್ರಿಲ್​- ಜೂನ್​ ತ್ರೈಮಾಸಿಕದಲ್ಲಿ ಭವಿಷ್ಯ ನಿಧಿ ಸಂಸ್ಥೆಗೆ 8.4 ಲಕ್ಷ ಜನರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಅಂದರೆ ಅಷ್ಟು ಜನರು ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ ಎಂದೇ ಅರ್ಥ.

    ಅದರಲ್ಲೂ ಏಪ್ರಿಲ್​ನಲ್ಲಿ 0.20 ಲಕ್ಷ ಹಾಗೂ ಮೇ ತಿಂಗಳಲ್ಲಿ 1.72 ಲಕ್ಷ ಹೊಸ ಸದಸ್ಯರು ಸೇರ್ಪಡೆಯಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ. ಆದರೆ, ಜೂನ್​ನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಇದೊಂದೇ ತಿಂಗಳಲ್ಲಿ 6.55 ಲಕ್ಷ ಗ್ರಾಹಕರನ್ನು ಹೊಸದಾಗಿ ಸೇರಿಸಿಕೊಂಡಿದೆ. ಹಿಂದಿನ ತಿಂಗಳಿಗೆ ಹೋಲಿಸಿದಲ್ಲಿ ಶೇ.280 ಹೆಚ್ಚಳವಾದಂತಾಗಿದೆ.

    ಇದನ್ನೂ ಓದಿ; ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್ ಸಾವು? ಇನ್ನು ಸಹೋದರಿಯದ್ದೇ ಆಧಿಪತ್ಯ? 

    ಸದಸ್ಯರ ಪ್ರಮಾಣ ಹೆಚ್ಚಾಗಿರುವುದು, ಹೊಸ ಸದಸ್ಯರ ಸೇರ್ಪಡೆ, ಸದಸ್ಯರ ನಿರ್ಗಮನ ಪ್ರಮಾಣ ಇಳಿಕೆಯಾಗಿರುವುದು ಸಹಜವಾಗಿಯೇ ಸಂತಸಕ್ಕೆ ಕಾರಣವಾಗಿದೆ ಎಂದು ಸಂಸ್ಥೆ ಹೇಳಿದೆ. ಲಾಕ್​ಡೌನ್​ ಹೆಚ್ಚಿನ ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ವಿರುದ್ಧವಾದ ಬೆಳವಣಿಗೆಯಾಗಿದೆ ಎಂದು ಸಂಸ್ಥೆ ಅಭಿಪ್ರಾಯಪಟ್ಟಿದೆ.

    ಮೆಟ್ರೋ ರೈಲು ಶುರುವಾಗುತ್ತೆ, ಶಾಲಾ- ಕಾಲೇಜುಗಳು ಮುಚ್ಚಿರುತ್ತೆ; ಅನ್​ಲಾಕ್​ 4.0 ಹೀಗಿರುತ್ತೆ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts