ಹೊನ್ನಾವರ: ಕಲಿಕಾ ಹಬ್ಬವು ಮಕ್ಕಳಲ್ಲಿ ಹೊಸ ಉತ್ಸಾಹ ಮೂಡಿಸುತ್ತದೆ. ಮಕ್ಕಳು ಮತ್ತು ಶಿಕ್ಷಕರು ಕಲಿಕಾ ಹಬ್ಬದಲ್ಲಿ ಭಾಗವಹಿಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ಆರ್. ಶಿವರಾಮು ಹೇಳಿದರು.
ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಹೊನ್ನಾವರ ಕ್ಲಸ್ಟರ್ ಮಟ್ಟದ ‘ಕಲಿಕಾ ಹಬ್ಬ’ ಉದ್ಘಾಟಿಸಿ ಅವರು ಮಾತನಾಡಿದರು.
ಡಯಟ್ ಉಪಪ್ರಾಂಶುಪಾಲ ಜಿ.ಎಸ್.ಭಟ್ ಮಾತನಾಡಿ, ಮೂಲಸಾಕ್ಷರತೆ ಮತ್ತು ಅಕ್ಷರ ಜ್ಞಾನ ನಮ್ಮೆಲ್ಲರ ಆದ್ಯತೆಯಾಗಿದೆ. ಇಂದು ಜಿಲ್ಲೆಯ ಮೊದಲ ಕಾರ್ಯಕ್ರಮ ಉದ್ಘಾಟನೆಯಾಗಿದೆ. ಇಲಾಖೆಯು ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಮಹತ್ವ ನೀಡಿದೆ. ಕಲಿಕಾ ಹಬ್ಬದ 7 ಹಂತದ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸುತ್ತಾರೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಗೌರವಗಳು ಸಿಗುತ್ತವೆ ಎಂದರು.
ಡಯಟ್ ಹಿರಿಯ ಉಪನ್ಯಾಸಕರಾದ ತ್ರಿವೇಣಿ ನಾಯಕ, ವೀಣಾ ನಾಯಕ, ಬಿಆರ್ಸಿ ಸಮನ್ವಯಾಧಿಕಾರಿ ವಿನಾಯಕ ಅವಧಾನಿ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಜಿ.ನಾಯ್ಕ, ಜಿಲ್ಲಾ ಗೌರವಾಧ್ಯಕ್ಷ ಸುಧೀಶ ನಾಯ್ಕ, ಸದಸ್ಯೆ ಲಕ್ಷ್ಮೀ ಎಚ್., ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಮೇಸ್ತ, ನಿಕಟಪೂರ್ವ ಅಧ್ಯಕ್ಷ ಮಾರುತಿ ನಾಯ್ಕ, ಸಿಆರ್ಪಿ ಪ್ರಕಾಶ ಶೇಟ್, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು. ಮುಖ್ಯಾಧ್ಯಾಪಕಿ ವಿಜಯಾ ಶೇಟ್ ಸ್ವಾಗತಿಸಿದರು. ಕಲಾ ಜಿ.ಎಸ್. ನಿರ್ವಹಿಸಿದರು.