ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ತರಗತಿಯ ಹೊರಗಿನ ಅನುಭವಗಳನ್ನು ಸ್ಪರ್ಧೆಗಳು ಕಲಿಸುತ್ತವೆ, ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಆ ಅನುಭವಗಳನ್ನು ಪಡೆದುಕೊಳ್ಳಬೇಕು ಎಂದು ಉಜಿರೆ ಎಸ್‌ಬಿಐ ಶಾಖಾ ವ್ಯವಸ್ಥಾಪಕಿ ದೀಕ್ಷಾ ಕೆ.ಹೇಳಿದರು.
ಮಂಗಳವಾರ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‌ನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ನಡೆದ ಒಂದು ದಿನದ ಕಾಲೇಜು ಮಟ್ಟದ ಸ್ಪರ್ಧೆ ’ಸಮನ್ವಯ・ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ ್ವರೂಪಿಸಲು ಸಹಾಯ ಮಾಡುತ್ತವೆ. ಇಲ್ಲಿ ಕಲಿತ ಪಾಠಗಳಿಂದ ವೈಯಕ್ತಿಕ ನಿರ್ವಹಣೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸಾಧನೆಯ ಕಡೆಗೆ ಸಾಗಬಹುದು ಎಂದರು.
ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ ಪಿ., ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ಪ್ರಿಯಾ ಕುಮಾರಿ ಎಸ್.ವಿ., ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನುಷಾ ಶೆಟ್ಟಿ ಸ್ವಾಗತಿಸಿ, ವಿಜಯಲಕ್ಷ್ಮೀ ವಂದಿಸಿದರು, ವೈಷ್ಣವಿ ನಿರೂಪಿಸಿದರು.