More

    ಮತ್ತೆ ಮಾಸ್ಕ್ ಕಡ್ಡಾಯ ಆದೇಶ; ಯಾರಿಗೆ, ಎಲ್ಲಿ?: ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

    ಬೆಂಗಳೂರು: ಕಳೆದ ಕೆಲವು ದಿನಗಳಿಂದ H3N2 ವೇರಿಯಂಟ್​​ನಿಂದ ದೇಶದಲ್ಲಿ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬೆಳಗ್ಗೆಯಷ್ಟೇ ತಿಳಿಸಿದ್ದರು. ಇದೀಗ ಸರ್ಕಾರದಿಂದ ನೂತನ ಮಾರ್ಗಸೂಚಿ ಬಿಡುಗಡೆಯಾಗಿದೆ. ಆ ಪೈಕಿ ಕೆಲವೊಂದು ಕಡೆ ಕೆಲವರಿಗೆ ಮಾಸ್ಕ್​ ಧರಿಸುವಿಕೆ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ.

    ಇದನ್ನೂ ಓದಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿಗೆ ವಿಜಯವಾಣಿಯ ವೀರಣ್ಣ, ಜಯತೀರ್ಥ ಆಯ್ಕೆ

    ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಈ ಕೆಳಗಿನ ಸೂಚನೆಗಳನ್ನು ಒಳಗೊಂಡ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

    • ILI/SARI ಕೇಸ್​ಗಳ ಮೇಲೆ ಸೂಕ್ತ ನಿಗಾ ವಹಿಸಬೇಕು
    • IDSP-IHIP ಪೋರ್ಟಲ್‌ನಲ್ಲಿ ಸಾರಿ ಕೇಸ್​ಗಳ ಬಗ್ಗೆ ಮಾದರಿ ಸಂಗ್ರಹಣೆಯ ಮಾಹಿತಿ ದಾಖಲು ಮಾಡಬೇಕು
    • ಅಗತ್ಯವಿರುವ ಪ್ರಮಾಣದಲ್ಲಿ ಔಷಧ ಸಂಗ್ರಹಿಸಿ ಇಟ್ಟಿಕೊಳ್ಳುವಂತೆ ಸೂಚನೆ
    • ILI/SARI ಕೇಸ್​ಗಳ ಚಿಕಿತ್ಸೆ ವೇಳೆ ಆರೋಗ್ಯ ಸಿಬ್ಬಂದಿ ಮಾಸ್ಕ್ ಹಾಗೂ ಪಿಪಿಇ ಕಿಟ್ ಧರಿಸಬೇಕು
    • ICU ಮತ್ತು ಆಸ್ಪತ್ರೆಯ ಚಿಕಿತ್ಸಾ ವಾರ್ಡ್​ಗಳಲ್ಲಿ ವೈದ್ಯಕೀಯ ಸಿಬ್ಬಂದಿ ಆರೋಗ್ಯ ಕಾರ್ಯಕರ್ತರು ಫ್ಲೂ ಲಸಿಕೆ ಪಡೆಯಬೇಕು
    • ಹೆಲ್ತ್ ಕೇರ್ ಫೆಸಿಲಿಟಿಗಳಲ್ಲಿ ಎಲ್ಲಾ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು
    • ಸಾರಿ ಕೇಸ್​​ಗಳಿಂದ ಮೃತಪಟ್ಟವರ ಸ್ವ್ಯಾಬ್​ ವರದಿಯನ್ನ ಹತ್ತಿರದ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯದ ಪ್ರಯೋಗಾಲಯದಲ್ಲಿ (VRDL) ಪರೀಕ್ಷೆಗೆ ಒಳಪಡಿಸಬೇಕು.
    • ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಕಾಲೋಚಿತ ಜ್ವರದ ರೋಗಲಕ್ಷಣದ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸ್ವಯಂ-ಔಷಧ ಮತ್ತು ಪ್ರತಿಜೀವಕಗಳ ಅನಗತ್ಯ ಬಳಕೆಯನ್ನು ತಪ್ಪಿಸಬೇಕು.
    • ಜನಜಾಗೃತಿಗಾಗಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳನ್ನು ಆಸ್ಪತ್ರೆಯ ಆವರಣದಲ್ಲಿ ಲಗತ್ತಿಸಬೇಕು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts