

ಬೆಂಗಳೂರು: ಕಳೆದ ಕೆಲವು ದಿನಗಳಿಂದ H3N2 ವೇರಿಯಂಟ್ನಿಂದ ದೇಶದಲ್ಲಿ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬೆಳಗ್ಗೆಯಷ್ಟೇ ತಿಳಿಸಿದ್ದರು. ಇದೀಗ ಸರ್ಕಾರದಿಂದ ನೂತನ ಮಾರ್ಗಸೂಚಿ ಬಿಡುಗಡೆಯಾಗಿದೆ. ಆ ಪೈಕಿ ಕೆಲವೊಂದು ಕಡೆ ಕೆಲವರಿಗೆ ಮಾಸ್ಕ್ ಧರಿಸುವಿಕೆ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ.
ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಈ ಕೆಳಗಿನ ಸೂಚನೆಗಳನ್ನು ಒಳಗೊಂಡ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.