21.7 C
Bengaluru
Tuesday, January 21, 2020

ವಿಹಾರಿ ಹಡಗು ಸೆಳೆಯಲು ಪ್ಲಾನ್

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಭರತ್ ಶೆಟ್ಟಿಗಾರ್ ಮಂಗಳೂರು
ಪಶ್ಚಿಮ ಕರಾವಳಿಯ ಪ್ರಮುಖ ಬಂದರುಗಳಲ್ಲಿ ಒಂದಾಗಿರುವ ನವಮಂಗಳೂರು ಬಂದರು ವಾಣಿಜ್ಯ ವಹಿವಾಟಿಗೆ ಹೆಚ್ಚು ಪ್ರಸಿದ್ಧಿ ಪಡೆದಿದೆ. ಆದರೆ, ಇತರ ಬಂದರುಗಳಿಗೆ ಹೋಲಿಸಿದರೆ ವಿಹಾರಿ ಹಡಗುಗಳ ಮೂಲಕ ವಿದೇಶಿ ಪ್ರವಾಸಿಗರ ಭೇಟಿ ಕಡಿಮೆ. ಪ್ರವಾಸಿ ನೌಕೆಗಳ ಸಂಖ್ಯೆ ಹೆಚ್ಚಳ ಮತ್ತು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ನವಮಂಗಳೂರು ಬಂದರು ಯೋಜನೆ ರೂಪಿಸಿದೆ.
ಪ್ರತೀ ವರ್ಷ ನವೆಂಬರ್‌ನಿಂದ ಮಾರ್ಚ್‌ವರೆಗೆ ಮಂಗಳೂರು ಬಂದರಿಗೆ ಪ್ರವಾಸಿ ನೌಕೆಗಳು ಬರುತ್ತವೆ. ವಿದೇಶಿ ಪ್ರವಾಸಿಗರಿಗೆ ಅನುಕೂಲ ವಾತಾವರಣ ಕಲ್ಪಿಸುವುದು ಆದ್ಯತೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೂ ಮಾತುಕತೆ ನಡೆಸಲಾಗಿದ್ದು, ಧನಾತ್ಮಕ ಭರವಸೆ ಸಿಕ್ಕಿದೆ ಎನ್ನುತ್ತಾರೆ ಎನ್‌ಎಂಪಿಟಿ ಚೇರ‌್ಮನ್ ಎ.ವಿ.ರಮಣ.

ಪ್ರಿಪೇಯ್ಡಿ ಟ್ಯಾಕ್ಸಿ: ಬಂದರು ಪ್ರಾಧಿಕಾರ ಜಿಲ್ಲಾಡಳಿತದ ಸಹಕಾರದಿಂದ ಬಂದರ್‌ನಲ್ಲಿ ಪ್ರಿಪೇಯ್ಡಿ ಟ್ಯಾಕ್ಸಿ ಕೌಂಟರ್ ಆರಂಭಿಸಲು ಉದ್ದೇಶಿಸಿದ್ದು, ಸ್ಥಳೀಯ ಪೊಲೀಸರ ನೆರವನ್ನೂ ಪಡೆಯಲಿದೆ. ಪ್ರವಾಸೋದ್ಯಮ ಇಲಾಖೆಯೂ ವಿವಿಧ ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಒದಗಿಸಲು ಮಂಡಳಿ ಮನವಿ ಮಾಡಿದೆ.

ಗೈಡ್‌ಗಳ ಕೊರತೆ: ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಇಂಗ್ಲಿಷ್, ಸ್ಪಾೃನಿಷ್, ಫ್ರೆಂಚ್ ಮೊದಲಾದ ಭಾಷೆ ಬಲ್ಲ ಮಾರ್ಗದರ್ಶಿ (ಗೈಡ್)ಗಳ ಅವಶ್ಯವಿದೆ. ಆದರೆ, ಮಂಗಳೂರಿನಲ್ಲಿ ಗೈಡ್‌ಗಳ ಕೊರತೆ ಇದೆ. ಮುಂಬೈ, ದೆಹಲಿಯಿಂದ ಗೈಡ್‌ಗಳನ್ನು ಕರೆಸಬೇಕಾದ ಅನಿವಾರ್ಯತೆ ಟ್ರಾವೆಲ್ ಏಜೆನ್ಸಿಗಳದ್ದು. ದಿನಕ್ಕೆ 8-10 ಸಾವಿರ ರೂ.ಭತ್ಯೆ, ಪ್ರಯಾಣ ಮತ್ತು ವಾಸ್ತವ್ಯದ ವೆಚ್ಚವನ್ನೂ ನೀಡಬೇಕು. ಅಷ್ಟಾಗಿಯೂ, ಅವರಿಗೆ ಸ್ಥಳೀಯ ಮಾಹಿತಿ ಇರುವುದಿಲ್ಲ. ಯುರೋಪಿಯನ್ ಭಾಷೆಗಳನ್ನು ಅಭ್ಯಾಸ ಮಾಡಿದರೆ ಸ್ಥಳೀಯ ಯುವಕರಿಗೆ ಸೀಸನ್‌ನಲ್ಲಿ ಉತ್ತಮ ಆದಾಯ ಪಡೆಯಬಹುದು. ಈ ಬಗ್ಗೆಯೂ ಎನ್‌ಎಂಪಿಟಿ ಗಮನ ಹರಿಸುತ್ತಿದೆ.

ಬಂದರಿನಲ್ಲಿ ಹಲವು ಸೌಲಭ್ಯ: ಕೇಂದ್ರ ಸರ್ಕಾರ 2016ರಲ್ಲಿ ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ವೀಸಾ ನೀಡುವ ಪ್ರಕ್ರಿಯೆ ಸರಳಗೊಳಿಸಿದೆ. ಪ್ರಸ್ತುತ ಬಂದರಿನಲ್ಲಿ ಆನ್ ಅರೈವಲ್ ವೀಸಾ, ಇ-ವೀಸಾ, ಇ-ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ವಿಮಾನ ನಿಲ್ದಾಣ ಮಾದರಿಯಲ್ಲಿ ಆಧುನಿಕ ಸುಸಜ್ಜಿತ ಇಮಿಗ್ರೇಶನ್ ಸೆಂಟರ್ ಇದೆ. ಬಂದರಿನ ಲಾಂಜ್‌ನಲ್ಲಿ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆ ಮೂಲಕ ಪ್ರವಾಸಿ ಮಾಹಿತಿ ಕೇಂದ್ರ, ಪ್ರಚಾರ ಕೇಂದ್ರ ತೆರೆದು ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದೆ.

ಪ್ರವಾಸಿಗರಿಗಾಗಿ ಹೊಸ ಗೇಟ್
ಪ್ರವಾಸೋದ್ಯಮ ಅಭಿವೃದ್ಧಿಯ ಒಂದು ಯೋಜನೆಯಾಗಿ, ಪ್ರವಾಸಿಗರಿಗಾಗಿಯೇ ಒಂದು ಹೊಸ ಪ್ರವೇಶದ್ವಾರ ನಿರ್ಮಿಸಲು ಉದ್ದೇಶಿಸಿದೆ. ಬಂದರಿಗೆ ಪ್ರಸ್ತುತ ಮೂರು ಪ್ರವೇಶ-ನಿರ್ಗಮನ ದ್ವಾರಗಳಿದ್ದು, ನಾಲ್ಕನೇ ದ್ವಾರ ಮುಂದಿನ ಮೂರರಿಂದ ನಾಲ್ಕು ವರ್ಷದಲ್ಲಿ ಸಿದ್ಧಗೊಳ್ಳಲಿದೆ. ಇದರಿಂದ ಬಂದರಿನಲ್ಲಿ ವಾಣಿಜ್ಯ ವಾಹನಗಳಿಂದ ಆಗುವ ಸಮಸ್ಯೆ ತಪ್ಪಿಸಿದಂತಾಗುತ್ತದೆ.

ಹೆಲಿಕಾಪ್ಟರ್ ಸೇವೆ
ಮಂಗಳೂರಿಗೆ ಬರುವ ಹೆಚ್ಚಿನ ಪ್ರವಾಸಿ ಹಡಗು ಗರಿಷ್ಠ 8-10 ತಾಸು ಬಂದರಿನಲ್ಲಿ ತಂಗಿ ಬಳಿಕ ಮುಂದಿನ ಬಂದರಿನತ್ತ ಪ್ರಯಾಣ ಬೆಳಸುತ್ತವೆ. ಈ ಅವಧಿಯಲ್ಲಿ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ಸಾಧ್ಯವಾಗುವುದಿಲ್ಲ. ಭೇಟಿ ನೀಡಿದರೂ ಅವಸರದಿಂದ ವಾಪಸ್ ಬರಬೇಕಾಗುತ್ತದೆ. ಕುಕ್ಕೆ, ಕೊಲ್ಲೂರು, ಶೃಂಗೇರಿ, ಧರ್ಮಸ್ಥಳಕ್ಕೆ ಭೇಟಿ ನೀಡದಿದ್ದರೆ ಜಿಲ್ಲೆಯ ಪ್ರವಾಸವೇ ಅಪೂರ್ಣವಾಗುತ್ತದೆ. ಆದ್ದರಿಂದ ಪ್ರವಾಸಿ ಹಡಗುಗಳು ಬರುವ ಅವಧಿಯಲ್ಲಿ ದೂರದ ಪ್ರವಾಸಿ ತಾಣಗಳಿಗೆ ಹೆಲಿಕಾಪ್ಟರ್ ಸೇವೆ ಆರಂಭಿಸುವಂತೆ ಬಂದರು ಮಂಡಳಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ಕೇರಳದ ಕೊಚ್ಚಿನ್ ಬಂದರಿಗೆ ಹೋಲಿಸಿದರೆ ನಮ್ಮಲ್ಲಿಗೆ ಬರುವ ಪ್ರವಾಸಿ ಹಡಗುಗಳ ಸಂಖ್ಯೆ ಕಡಿಮೆ. ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯವಿರುವ ನಗರಗಳನ್ನು ಪ್ರವಾಸಿಗರು ಗುರುತಿಸಿ ಭೇಟಿ ನೀಡುತ್ತಾರೆ. ನವಮಂಗಳೂರು ಬಂದರಿಗೆ ಈ ಬಾರಿಯೂ ಉತ್ತಮ ಸಂಖ್ಯೆಯ ನೌಕೆ ಹಾಗೂ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ನವೆಂಬರ್‌ನಿಂದ ಹಡಗುಗಳು ಬರಲು ಆರಂಭವಾಗಲಿವೆ.
– ಎ.ವಿ.ರಮಣ, ಎನ್‌ಎಂಪಿಟಿ ಅಧ್ಯಕ್ಷ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...