More

    ಎಲೆಕ್ಟ್ರಾನಿಕ್ಸ್ ಸಿಟಿ ಕ್ಯಾಂಪಸ್​ನಲ್ಲಿ ವೈದ್ಯ ಕಾಲೇಜಿಗೆ ಶಂಕುಸ್ಥಾಪನೆ

    ಬೆಂಗಳೂರು:  ಪಿಇಎಸ್ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು ಎಲ್ಲ ವರ್ಗದ ಜನರಿಗೆ ಅತ್ಯುತ್ತಮ ಸೇವೆ ಒದಗಿಸುವ ಮೂಲಕ ಮಾದರಿ ಸಂಸ್ಥೆಯಾಗಿ ಬೆಳೆಯಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

    ಎಲೆಕ್ಟ್ರಾನಿಕ್ಸ್ ಸಿಟಿ ಕ್ಯಾಂಪಸ್​ನಲ್ಲಿ ನಿರ್ಮಾಣವಾಗಲಿರುವ ಪಿಇಎಸ್ ವಿವಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಕಟ್ಟಡಕ್ಕೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳಲ್ಲಿ ಪಿಇಎಸ್ ಅಗ್ರಣಿ ಸಂಸ್ಥೆಯಾಗಿದೆ. 4 ದಶಕಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ಇದೀಗ 1,200 ಒಳರೋಗಿಗಳ ದಾಖಲು ಸಾಮರ್ಥ್ಯದ ವೈದ್ಯಕೀಯ ಶಿಕ್ಷಣ ಸಂಸ್ಥೆ ನಿರ್ವಣಕ್ಕೆ ಮುಂದಾಗಿರುವುದು ಮಹತ್ವದ ಬೆಳವಣಿಗೆ. ಎಲ್ಲ ವರ್ಗದವರಿಗೆ ಅನುಕೂಲವಾಗುವಂತೆ ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವಂತಾಗಲಿ ಎಂದರು.

    ಪಿಇಎಸ್ ವಿವಿ ಕುಲಾಧಿಪತಿ ಡಾ.ಎಂ.ಆರ್. ದೊರೆಸ್ವಾಮಿ ಮಾತನಾಡಿ, 1972ರಲ್ಲಿ ಆರಂಭವಾದ ಸಂಸ್ಥೆಯು ಎಲ್​ಕೆಜಿ ಯಿಂದ ಪಿಎಚ್.ಡಿವರೆಗೆ ಎಲ್ಲ ರೀತಿಯ ಶಿಕ್ಷಣ ನೀಡುತ್ತಿದೆ. ಇದೀಗ ವೈದ್ಯಕೀಯ ಶಿಕ್ಷಣ ಆರಂಭಿಸಿ ಇನ್ನಷ್ಟು ಕೊಡುಗೆ ನೀಡುವ ಮಹದಾಸೆ ಹೊಂದಲಾಗಿದೆ ಎಂದು ಹೇಳಿದರು. ಪಿಇಎಸ್ ಸಹಕುಲಾಧಿಪತಿ ಪ್ರೊ. ಡಿ. ಜವಾಹರ್, ಕಂದಾಯ ಸಚಿವ ಆರ್. ಅಶೋಕ್, ಶಾಸಕ ಎಂ. ಕೃಷ್ಣಪ್ಪ, ಎಲೆಕ್ಟ್ರಾನಿಕ್ಸ್ ಸಿಟಿ ಕ್ಯಾಂಪಸ್ ನಿರ್ದೇಶಕ ಸೂರ್ಯಪ್ರಕಾಶ್ ಹಾಗೂ ವೈದ್ಯಕೀಯ ಕಾಲೇಜು ವ್ಯವಸ್ಥಾಪಕ ನಿರ್ದೇಶಕ ಡಾ. ಸುರೇಶ್ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

    ಪಿಇಎಸ್ ಶಿಕ್ಷಣ ಸಂಸ್ಥೆಯು ಆಂಧ್ರಪ್ರದೇಶದ ಕುಪ್ಪಂನಲ್ಲಿ 2001ರಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಿದ್ದು, ಕ್ಷೇತ್ರದ ಶಿಕ್ಷಣದಲ್ಲಿ 2 ದಶಕಗಳ ಅನುಭವ ತನ್ನದಾಗಿಸಿಕೊಂಡಿದೆ. ರಾಜ್ಯದಲ್ಲಿಯೂ ಮಾದರಿ ಶಿಕ್ಷಣ ಹಾಗೂ ಆರೋಗ್ಯ ಸೇವೆ ನೀಡುವ ಮೂಲಕ ರಾಜ್ಯದ ಶಿಕ್ಷಣ ಪ್ರಗತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಾಗುವುದು.

    | ಡಾ.ಎಂ.ಆರ್. ದೊರೆಸ್ವಾಮಿ ಪಿಇಎಸ್ ವಿವಿ ಕುಲಾಧಿಪತಿ  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts