More

    ಕರೊನಾ ಹೊಸ ಅಲೆಯ ಆತಂಕ; ಸರ್ಕಾರದಿಂದ ಹೊರಬಿತ್ತು ಹೊಸದೊಂದು ಆದೇಶ

    ಬೆಂಗಳೂರು: ಕರೊನಾ ಆತಂಕದ ಹಿನ್ನೆಲೆಯಲ್ಲಿ ಈಗಾಗಲೇ ಮಾರ್ಗಸೂಚಿ ಹೊರಡಿಸಿ ಒಂದಷ್ಟು ನಿಯಮಗಳನ್ನು ವಿಧಿಸಿರುವ ಸರ್ಕಾರ ಇದೀಗ ಹೊಸ ಆದೇಶವನ್ನು ಹೊರಡಿಸಿದೆ. ಹೊಸ ವರ್ಷದ ಮುನ್ನಾ ದಿನವೇ ಈ ಆದೇಶ ಹೊರಬಿದ್ದಿದೆ.

    ಕರೊನಾಗೆ ಸಂಬಂಧಿಸಿದಂತೆ ಹೈ-ರಿಸ್ಕ್‌ ಎನಿಸಿಕೊಂಡಿರುವ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನ್ವಯಿಸುವಂತೆ ಈ ಆದೇಶ ಹೊರಡಿಸಲಾಗಿದೆ. ಅಂದರೆ ಹೈ-ರಿಸ್ಕ್ ದೇಶಗಳಿಂದ ಬರುವ ವಿಮಾನ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ಆದೇಶಿಸಲಾಗಿದೆ.

    ಚೀನಾ, ಹಾಂಗ್‌ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಹಾಗೂ ಥಾಯ್ಲೆಂಡ್‌ನಿಂದ ಬರುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ. ವಿಮಾನನಿಲ್ದಾಣದಲ್ಲೇ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಿದ್ದು, ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಮುವಾಯ್​ಥಾಯ್‌ನಲ್ಲಿ ಶೌರ್ಯ ಮೆರೆದ ಕನ್ನಡಿಗ ಸೂರ್ಯ; ಥಾಯ್ಲೆಂಡ್​ನಲ್ಲಿ ಸೆಣಸಿ ಮಿಂಚಿದ ಸ್ಯಾಂಡಲ್‌ವುಡ್ ನಟನ‌ ಪುತ್ರ

    5 ಕೊಲೆ ಮಾಡಿದ್ದವ 28 ವರ್ಷಗಳ ಬಳಿಕ ಸಿಕ್ಕಿಬಿದ್ದ!; 3 ತಿಂಗಳಿಂದ 5 ವರ್ಷದೊಳಗಿನ 4 ಮಕ್ಕಳನ್ನು ಹತ್ಯೆ ಮಾಡಿದ್ದ!

    ಸರ್ವರೋಗಕ್ಕೂ ಇದೇ ಮದ್ದು!; ಚಿನ್ನಕ್ಕಿಂತಲೂ ದುಬಾರಿ ಈ ವಸ್ತು: ಇದಕ್ಕೆಂದೇ ಚೀನಾದವರು ಭಾರತದೊಳಕ್ಕೆ ನುಗ್ಗಿದ್ದಾರೆ ಹಲವು ಸಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts