More

    ಶಾಂತಿ, ಸುವ್ಯವಸ್ಥೆಗೆ ಒಗ್ಗೂಡಿ ಶ್ರಮ, ಮಂಗಳೂರು ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಭರವಸೆ

    ಮಂಗಳೂರು: ಅಪರಾಧ ಪ್ರಕರಣಗಳನ್ನು ನಿಯಂತ್ರಿಸಿ, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಿಬ್ಬಂದಿ ಹಾಗೂ ಅಧಿಕಾರಿಗಳ ಜತೆಗೂಡಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಮಂಗಳೂರು ನೂತನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
    ಶುಕ್ರವಾರ ಅಧಿಕಾರ ಸ್ವೀಕರಿಸಿದ ಅವರು, ಅಕ್ರಮ ಚಟುವಟಿಕೆ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅವಶ್ಯ; ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮಂಗಳೂರಿನಲ್ಲಿ ಅಕ್ರಮ ಮರಳು, ಗಾಂಜಾ ಸೇರಿದಂತೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಅದಕ್ಕೆ ಕಡಿವಾಣ ಹಾಕಲಾಗುವುದು. ಸುಶಿಕ್ಷಿತರು, ಪ್ರಜ್ಞಾವಂತರ ಜಿಲ್ಲೆಯಾಗಿರುವ ಇಲ್ಲಿ ಕಾನೂನನ್ನು ಗೌರವಿಸುವವರ ಸಂಖ್ಯೆ ಹೆಚ್ಚಿದೆ ಎಂದರು.

    ಮಂಗಳೂರು ನನಗೆ ಹೊಸತೇನಲ್ಲ, ಚಿಕ್ಕಮಗಳೂರು ಎಸ್‌ಪಿ ಆಗಿದ್ದಾಗ ಇಲ್ಲಿರುವ ಐಜಿಪಿ ಕಚೇರಿಗೆ ಹಲವು ಬಾರಿ ಬಂದಿದ್ದೇನೆ. ಪ್ರವಾಸೋದ್ಯಮ, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಮಾಡಿದ್ದೇನೆ. ಈ ನಗರದ ಆಯುಕ್ತನಾಗಿ ಅಧಿಕಾರ ಸ್ವೀಕರಿಸಿರುವುದಕ್ಕೆ ಹೆಮ್ಮೆಯಿದೆ. ಆಯುಕ್ತಾಲಯದ ಎಲ್ಲ ಠಾಣೆಗಳು ಒಂದು ತಂಡವಾಗಿ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರ ನಿರೀಕ್ಷೆಯನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದರು.

    ನಗರದಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ನಡೆದ ಹಲ್ಲೆಯನ್ನು ಸಹಿಸಲು ಸಾಧ್ಯವಿಲ್ಲ. ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಬೆಳೆದ ನಗರದಲ್ಲಿ ಸರಗಳ್ಳತನ ಸೇರಿದಂತೆ ಕೆಲವೊಂದು ಅಪರಾಧ ಪ್ರಕರಣ ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರ ಸುರಕ್ಷತೆಗೆ ಒತ್ತು ನೀಡಲಾಗುವುದು. ಕೋವಿಡ್ ಸಂದರ್ಭ ಅನ್ಯ ಕೆಲಸದ ಒತ್ತಡದಿಂದ ರಾಜ್ಯಾದ್ಯಂತ ಬೀಟ್ ವ್ಯವಸ್ಥೆ ಸ್ವಲ್ಪ ಕ್ಷೀಣಿಸಿತ್ತು. ಮುಂದಿನ ದಿನಗಳಲ್ಲಿ ಹಿಂದಿನಂತೆ ಬೀಟ್ ಬಲಪಡಿಸಲಾಗುವುದು. ಸಾರ್ವಜನಿಕರ ಜತೆ ನೇರ ಸಂಪರ್ಕ ಸಾಧಿಸುವ ದೃಷ್ಟಿಯಿಂದ ನೇರ ೆನ್-ಇನ್ ಕಾರ್ಯಕ್ರಮ ಮುಂದುವರಿಸುವ ಬಗ್ಗೆ ಚಿಂತಿಸಲಾಗುವುದು ಎಂದರು.
    ಡಿಸಿಪಿಗಳಾದ ವಿನಯ ಗಾಂವ್‌ಕರ್, ಹರಿರಾಂ ಶಂಕರ್ ಉಪಸ್ಥಿತರಿದ್ದರು.

    ಜಾಲತಾಣ ನಿಗಾ: ಪ್ರಸ್ತುತ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣದಿಂದ ಒಳಿತು-ಕೆಡುಕುಗಳಿವೆ. ಸಾಮಾಜಿಕ ಜಾಲತಾಣವನ್ನು ಬಳಸಿ ಸಮಾಜದ ಶಾಂತಿಯನ್ನು ಕದಡುವ ಘಾತುಕರ ಮೇಲೆ ನಿಗಾ ಇಡಲಾಗುವುದು. ನಮ್ಮ ಸೈಬರ್ ತಂಡ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ. ಮಂಗಳೂರಿನಲ್ಲಿ ಸೈಬರ್ ಮತ್ತು ನಾರ್ಕೊಟಿಕ್ ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿದ್ದು, ಈ ಠಾಣೆಗಳು ಹೆಚ್ಚಿನ ನಿಗಾವಹಿಸಿ ಕಾರ್ಯನಿರ್ವಹಿಸಲಿದೆ ಎಂದು ಶಶಿಕುಮಾರ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts