More

  ಮಾನ್ವಿತಾ ಜತೆ ನಕುಲ್ ರೊಮ್ಯಾನ್ಸ್​! “BAD” ಚಿತ್ರಕ್ಕೆ ಕವಿರಾಜ್ ಸಾಥ್​

  ಬೆಂಗಳೂರು: ಪಿ.ಸಿ.ಶೇಖರ್ ನಿರ್ದೇಶನದ, ಎಸ್. ಆರ್. ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ಮತ್ತು ಮಾನ್ವಿತಾ ಹರೀಶ್​ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ “BAD” ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ “ಮಾತಿಗೂ ಮಾತಿಗೂ” ಎಂಬ ಸುಂದರ ಯುಗಳಗೀತೆ ಬರೆದಿದ್ದಾರೆ. ಈ ಹಾಡಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

  ಇದನ್ನೂ ಓದಿ: ಕೆಲಸ ಮಾಡುವವರಿಗೆ ಭಾಷೆ ಮುಖ್ಯವಲ್ಲ: ಪ್ರಮೋದ್​ ಮಧ್ವರಾಜ್​

  ಈ ಹಾಡನ್ನು ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಹಾಗೂ ಸುನೀಲ್ ಗುಜಗೊಂಡ ಸುಶ್ರಾವ್ಯವಾಗಿ ಹಾಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಜನಮನಸೂರೆಗೊಳ್ಳುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ ಬ್ಯಾಡ್​ ಚಿತ್ರ, ಹಾಡುಗಳ ಮೂಲಕವೂ ಜನಪ್ರಿಯವಾಗುತ್ತಿದೆ. ಚಿತ್ರ ಶೀಘ್ರವೇ ತೆರೆಗೆ ಬರಲು ಸಜ್ಜಾಗಿದೆ.

  ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ “BAD” ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಸಿನಿಮಾಗೆ ಸಚಿನ್ ಜಡೇಶ್ವರ ಎಸ್​. ಬಿ ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಮಾನ್ವಿತಾ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್, ಅಶ್ವಿನಿ ಮುಂತಾದವರ ತಾರಾಬಳಗವಿದೆ.

  ಬಾಲ್ಯದಲ್ಲೇ ಸರಣಿ ಕೊಲೆಗಳ ಕಂಡೆ, ಕುಡಿತಕ್ಕೆ ದಾಸನದೆ! ಆತ್ಮಹತ್ಯೆಗೆ ಯತ್ನಿಸಿದ್ದ ಈ ವ್ಯಕ್ತಿ ಇಂದು ಸ್ಟಾರ್​ ನಟ…

  ಅಂದು RCB 263… ಇಂದು SRH 277! ಎರಡು ದಾಖಲೆಯ ಸಮಯದಲ್ಲೂ ತಂಡದಲ್ಲಿದ್ದ ಏಕೈಕ ಆಟಗಾರ ಇವರು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts