More

    ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ಕೆತ್ತನೆಯ ರಾಮಲಲ್ಲಾ ವಿಗ್ರಹ ಗರ್ಭಗುಡಿಗೆ: ಚಂಪತ್ ರಾಯ್ ಅಧಿಕೃತ ಹೇಳಿಕೆ

    ಬೆಂಗಳೂರು: ಅಯೋಧ್ಯೆ ರಾಮ ಮಂದಿರಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆಯಾಗಿರುವುದಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್​ ರಾಯ್ ಅವರು ಸೋಮವಾರ (ಜ.15)​ ಅಧಿಕೃತವಾಗಿ ತಿಳಿಸಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ 22ರ ಉದ್ಘಾಟನಾ ದಿನದಂದು ರಾಮಮಂದಿರದ ಗರ್ಭಗುಡಿಯ ಒಳಗೆ ಪ್ರಧಾನಿ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ, ಉತ್ತರ ಪ್ರದೇಶ ಮುಖ್ಯಮಂತ್ರಿ, ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಎಲ್ಲಾ ದೇವಸ್ಥಾನದ ಟ್ರಸ್ಟಿಗಳು ಉಪಸ್ಥಿತರಿರುತ್ತಾರೆ. 150ಕ್ಕೂ ಹೆಚ್ಚು ಸಂತರು, ವಿವಿಧ ಕ್ಷೇತ್ರಗಳ ತಜ್ಞರು ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ಚಂಪತ್ ರಾಯ್​ ಹೇಳಿದರು.

    ಯೋಗಿರಾಜ್ ಅವರು​​ ಕೆತ್ತಿರುವ ರಾಮಲಲ್ಲಾ ಹೊಸ ವಿಗ್ರಹದ ಜೊತೆಗೆ ಪ್ರಸ್ತುತ ಇರುವ ರಾಮಲಲ್ಲಾ ಪ್ರತಿಮೆಯನ್ನೂ ಸಹ ಹೊಸ ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ ಎಂದರು. ಪ್ರಾಣ ಪ್ರತಿಷ್ಠಾಗೆ ಸಂಬಂಧಿಸಿದ ಪೂಜಾ ವಿಧಿವಿಧಾನಗಳು ನಾಳೆಯಿಂದ (ಮಂಗಳವಾರ, ಜನವರಿ 16) ಪ್ರಾರಂಭವಾಗಲಿವೆ ಎಂದು ತಿಳಿಸಿದ್ದಾರೆ.

    ಅರುಣ್ ಯೋಗಿರಾಜ್ ಯಾರು? : ಅರುಣ್ ಯೋಗಿರಾಜ್ ತಂದೆ, ತಾತ, ಮುತ್ತಾತ, ಅವರ ತಂದೆ ಹಾಗೂ ತಾತ, ಅಂದರೆ ಬರೋಬ್ಬರಿ ಐದು ತಲೆ ಮಾರಿನಿಂದ ಕಲ್ಲಿನ ಶಿಲ್ಪ ಕಲೆಯಲ್ಲಿ ಇವರ ವಂಶಸ್ಥರು ತೊಡಗಿಕೊಂಡಿದ್ದಾರೆ. ಅರುಣ್ ಯೋಗಿರಾಜ್ ಅವರ ಕುಟುಂಬ ಕಲ್ಲಿನ ವಿಗ್ರಹ ಶಿಲ್ಪದಲ್ಲಿ 200 ವರ್ಷಗಳ ಪರಂಪರೆ ಹೊಂದಿದೆ.

    ಅರುಣ್ ಯೋಗಿರಾಜ್ ಅವರ ಅಜ್ಜ ಬಸವಣ್ಣ ಶಿಲ್ಪಿ ಮೈಸೂರು ರಾಜರ ಆಸ್ತಾನದಲ್ಲಿದ್ದರು. ತಾತ ಮುತ್ತಾತ ಕೂಡ ಶಿಲ್ಪಿಗಳಾಗಿದ್ದರು. ಅರುಣ್ ಯೋಗಿರಾಜ್ ಅವರು ಬಾಲ್ಯದಿಂದಲೂ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದರು. ಅರುಣ್ ಯೋಗಿರಾಜ್ ಎಂಬಿಎ ಪಧವಿದರ ಆಗಿದ್ದಾನೆ. ವಿದ್ಯಾಭ್ಯಾಸ ಮುಗಿಸಿದ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಕಾಲ ಕೆಲಸ ಮಾಡಿದ್ದಾರೆ. ಆದರೆ ಅವರಿಗೆ ಆ ಕೆಲದ ತೃಪ್ತಿ ನೀಡಲಿಲ್ಲ. ಆಗ ಅವರಿಗೆ, ತಮ್ಮ ಪೂರ್ವಜರ ಕಲೆಯನ್ನು ಮುಂದುವರಿಸಿದ್ದಾರೆ. ಅರುಣ್ ಯೋಗಿರಾಜ್ 2008ರಿಂದ ಮತ್ತೆ ಶಿಲ್ಪ ಕೆತ್ತನೆ ವೃತ್ತಿ ಮುಂದುವರಿಸಿದರು.

    ದೆಹಲಿಯ ಇಂಡಿಯಾ ಗೇಟ್ ಬಳಿಯ ಅಮರ್ ಜವಾನ್ ಜ್ಯೋತಿಯ ಹಿಂದೆ ಸ್ಥಾಪಿಸಲಾಗಿರುವ ಸುಭಾಷ್ ಚಂದ್ರ ಬೋಸ್ ಅವರ 30-ಅಡಿ ಪ್ರತಿಮೆಯನ್ನು ನಿರ್ಮಾಣ ಮಾಡಿರುವುದೂ ಸೇರಿದಂತೆ ಹಲವು ಪ್ರಮುಖ ಪ್ರತಿಮೆ ನಿರ್ಮಾಣಗಳಲ್ಲಿ ಅರುಣ್ ಅವರ ಶ್ರಮವಿದೆ. ಕೇದಾರನಾಥದ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಶಿಲ್ಪ ಮತ್ತು ಮೈಸೂರಿನ 21 ಅಡಿ ಎತ್ತರದ ಹನುಮಾನ್ ಪ್ರತಿಮೆ ಕೂಡ ಅರುಣ್ ಯೋಗಿರಾಜ್ ಕೆತ್ತನೆಯಲ್ಲಿ ಮೂಡಿಬಂದಿರುವುದು ಗಮನಾರ್ಹ.

    ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮನ ವಿಗ್ರಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲು ಆಯ್ಕೆಯಾಗಿರುವ ಸಂಗತಿ ಇದೀಗ ರಾಜ್ಯಕ್ಕೆ ಹೆಮ್ಮೆ ತಂದಿದೆ.

    ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್​ಗೆ ಕೇಂದ್ರ ಸಚಿವರು ಹೇಳಿದ್ದಿಷ್ಟು!

    ಆಯೋಧ್ಯೆಯಲ್ಲಿ ರಾಮಲಲ್ಲ ವಿಗ್ರಹ ಕೆತ್ತನೆ ಪೂರ್ಣಗೊಳಿಸಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts