More

    1.5 ಕೋಟಿ ರೂ. ವೆಚ್ಚದಲ್ಲಿ ತಾಪಂ ನೂತನ ಕಟ್ಟಡ

    ಕಾರ್ಕಳ: ತಾಲೂಕು ಪಂಚಾಯಿತಿಯ ಹಳೇ ಕಟ್ಟಡ ಬದಲಾಯಿಸಿ 1.5 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ ಎಂದು ಸರ್ಕಾರದ ಮುಖ್ಯ ಸಚೇತಕ ವಿ.ಸುನೀಲ್‌ಕುಮಾರ್ ಹೇಳಿದರು.

    ಕಾರ್ಕಳ ತಾಲೂಕು ಪಂಚಾಯಿತಿಯಲ್ಲಿ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಲ್ಲದ 3000ಕ್ಕೂ ಅಧಿಕ ಹಕ್ಕುಪತ್ರ ಫಲಾನುಭವಿಗಳಿಗೆ ಈ ಹಿಂದೆ ನೀಡಲಾಗಿತ್ತು. ಈಗ 94ಸಿ, 94 ಸಿಸಿ ಯೋಜನೆಯಡಿ ಇನ್ನಷ್ಟು ಮಂದಿಗೆ ಹಕ್ಕುಪತ್ರ ನೀಡಿ ಜಾಗದ ಮಾಲೀಕತ್ವ ನೀಡಲಾಗಿದೆ ಎಂದರು.
    ಸಂಸದೆ ಶೋಭಾ ಕರಂದ್ಲಾಜೆ, ತಹಸೀಲ್ದಾರ್ ಪುರಂದರ ಹೆಗ್ಡೆ, ತಾಪಂ ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಉಪಾಧ್ಯಕ್ಷ ಹರೀಶ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಹೆಬ್ರಿ ತಾಪಂ ಅಧ್ಯಕ್ಷ ರಮೇಶ್ ಪೂಜಾರಿ, ಉಪಾಧ್ಯಕ್ಷ ಚಂದ್ರಶೇಖರ್, ಜಿಪಂ ಸದಸ್ಯರಾದ ಸುಮಿತ್ ಶೆಟ್ಟಿ ಬೈಲೂರು, ಇರ್ವತ್ತೂರು ಉದಯ ಎಸ್.ಕೋಟ್ಯಾನ್, ರೇಶ್ಮಾ ಶೆಟ್ಟಿ, ಜ್ಯೋತಿ ಪೂಜಾರಿ, ದಿವ್ಯಶ್ರೀ ಅಮೀನ್, ಎಪಿಎಂಸಿ ಅಧ್ಯಕ್ಷ ಮೋಹನ್‌ದಾಸ್ ಶೆಟ್ಟಿ, ಕಾರ್ಕಳ ತಾಪಂ ಇಒ ಮೇಜರ್ ಡಾ.ಹರ್ಷ ಮೊದಲಾದವರು ಉಪಸ್ಥಿತರಿದ್ದರು.

    ಹಕ್ಕುಪತ್ರ ವಿತರಣೆ, ಸನ್ಮಾನ: 65 ಮಂದಿಗೆ ಹಕ್ಕುಪತ್ರ, 65 ಜನರಿಗೆ ಪ್ರಾಕೃತಿಕ ವಿಕೋಪದಡಿ ಪರಿಹಾರ, 17 ಮಂದಿಗೆ ಪಿಂಚಣಿ ಸವಲತ್ತು ವಿತರಿಸಲಾಯಿತು. ಕೋವಿಡ್ -19 ತಡೆಗೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ತುಷಾರ್ ಅವರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts