ಕಣ್ಣಿಗೊಂದು ಸವಾಲು: ಜೀನಿಯಸ್​​ ಮಾತ್ರ ಈ ಫೋಟೋದಲ್ಲಿರುವ ಕಾರನ್ನು ಪತ್ತೆ ಹಚ್ಚಬಲ್ಲರು! Optical Illusion Challenge

optical illusion challenge
Published on

Optical Illusion Challenge : ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೃಷ್ಟಿ ಭ್ರಮೆ ಎಂದರೇನು?

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.

ಮೋಜಿನ ಮಾರ್ಗ

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

optical illusion challenge 1

ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಬೃಹತ್​ ಕಟ್ಟಡವೊಂದರ ಅದ್ಭುತ ಒಳಂಗಾಣ ದೃಶ್ಯವನ್ನು ಕಾಣಬಹುದು. ಅಲ್ಲಲ್ಲಿ ಸೋಫಾ ಇಡಲಾಗಿದೆ. ಅಲ್ಲದೆ, ಒಂದು ಭಾಗದಲ್ಲಿ ಟೇಬಲ್ ಮತ್ತು ಕುರ್ಚಿಗಳು​ ಕೂಡ ಇವೆ. ಸಾಕಷ್ಟು ಲೈಟ್​ಗಳನ್ನು ಅಳವಡಿಸಲಾಗಿದ್ದು, ಬೆಳಕಿನಿಂದ ಕಂಗೊಳಿಸುತ್ತಿದೆ. ಅಲ್ಲದೆ, ಅಲ್ಲೊಂದು ಕಾರು ಕೂಡ ಇದೆ. ಅದು ಎಲ್ಲಿದೆ ಎಂದು ಪತ್ತೆಹಚ್ಚಬೇಕು. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಕಣ್ಣಿಗೆ ಮಾತ್ರವಲ್ಲದೆ, ತಲೆಗೆ ಕೊಂಚ ಕೆಲಸ ಕೊಟ್ಟು ಸೂಕ್ಷ್ಮವಾಗಿ ಗಮನಿಸಿದರೆ ಕಾರು ಎಲ್ಲಿದೆ ಎಂಬುದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿ ಕಾರು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಕಾರು ಎಲ್ಲಿದೆ ಎಂದು ಪತ್ತೆಹಚ್ಚಿದ್ದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ನಿಜಕ್ಕೂ ನೀವು ಜೀನಿಯಸ್​. ಒಂದು ವೇಳೆ ಕಾರು ಎಲ್ಲಿದೆ ಎಂದು ಪತ್ತೆಹಚ್ಚಲಾಗದೇ ಪರದಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

optical illusion challenge 2
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net