

ಬೆಂಗಳೂರು: 2025-26ನೇ ಸಾಲಿನ ಬಜೆಟ್ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಬಜೆಟ್ನಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಲಾಗಿದ್ದು, ಪ್ರಮುಖವಾಗಿ ಜಲಸಾರಿಗೆ ಕ್ಷೇತ್ರಕ್ಕೆ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.
ಬಜೆಟ್ನಲ್ಲಿ ರಾಜ್ಯದ ಜಲಸಾರಿಗೆ ಕ್ಷೇತ್ರಕ್ಕೆ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್, ವಾಟರ್ ಮೆಟ್ರೋ ಮತ್ತು ಕೋಸ್ಟಲ್ ಬರ್ತ್ ನಿರ್ಮಾಣ. ಉತ್ತರ ಕನ್ನಡ ಜಿಲ್ಲೆ ಮಂಕಿ ಗ್ರಾಮದಲ್ಲಿ ಬಂದರು ನಿರ್ಮಾಣ. ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಅನುಭವ ಕೇಂದ್ರ ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
ಇನ್ನೂ ಬಜೆಟ್ನಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಲಾಗಿದ್ದು, ವೃತ್ತಿ ತೆರಿಗೆಯನ್ನು 200 ರೂ. ರಿಂದ 300 ರೂ.ಗೆ ಏರಿಕೆ ಮಾಡಲಾಗಿದೆ. ಇದಲ್ಲದೆ ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಮೂಲಸೌಕರ್ಯ ಅಭಿವೃದ್ಧಿ ಹೊಸ ಕಾರ್ಯಕ್ರಮ ಜಾರಿ ಮಾಡಲಾಗಿದ್ದು, ಈ ಯೋಜನೆಯಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಘೋಷಿಸಲಾಗಿದೆ.
ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ. ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.