More

    ಈ ಬಾರಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಇಲ್ಲ: ಬಿಬಿಎಂಪಿ

    ಬೆಂಗಳೂರು : ಕರೊನಾ ಸೋಂಕಿನ ಆರ್ಭಟ ಇಳಿಮುಖವಾಗುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರದು ಎಂದು ಸರ್ಕಾರಕ್ಕೆ ಬಿಬಿಎಂಪಿ ಶಿಫಾರಸು ಮಾಡಿದೆ.

    ವಿಧಾನಸೌಧದಲ್ಲಿ ಇತ್ತೀಚೆಗೆ ಗೃಹ ಮತ್ತು ಕಂದಾಯ ಸಚಿವರ ನೇತೃತ್ವದಲ್ಲಿ ಹೊಸ ವರ್ಷದ ಆಚರಣೆ ಅವಕಾಶ ನೀಡುವ ಕುರಿತು ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಪಾಲಿಕೆ ಆಯುಕ್ತರು, ಚಳಿಗಾಲದಲ್ಲಿ ಸಾಮೂಹಿಕ ಹೊಸ ವರ್ಷಾಚರಣೆಗೆ ಅವಕಾಶ ನೀಡಿದಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗುತ್ತದೆ. ಹೀಗಾಗಿ, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ವಿಠಲ್ ಮಲ್ಯ ರಸ್ತೆ, ಕಮರ್ಷಿಯಲ್ ಸ್ಟ್ರೀಟ್ ಸೇರಿ ಇತರೆಡೆ ವರ್ಣರಂಜಿತ ಹೊಸ ವರ್ಷಾಚರಣೆ ನಿಷೇಧಿಸಬೇಕು. ಪಬ್, ಹೋಟೆಲ್, ಕ್ಲಬ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಪಾರ್ಟಿ, ಸಾಂಸ್ಕೃತಿ ಮತ್ತು ಸಂಗೀತ ಕಾರ್ಯಕ್ರಮ ಆಯೋಜನೆ ತಡೆಹಿಡಿಯಬೇಕು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿರಿ ಮಗಳ ಚೀರಾಟ ಕೇಳಿ ಪಾಲಕರು ಓಡಿ ಬರುವಷ್ಟರಲ್ಲಿ ಹೆಣವಾಗಿದ್ದಳು! ಅಲ್ಲೇ ಕುಳಿತಿದ್ದ ಬಾಲಕ ಬಾಯ್ಬಿಟ್ಟ ಸ್ಫೋಟಕ ರಹಸ್ಯ

    ಈ ಕುರಿತು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್, 6 ಸಾವಿರಕ್ಕೂ ಅಧಿಕ ಸೋಂಕು ಪತ್ತೆಯಾಗುತ್ತಿದ್ದ ಪ್ರಕರಣಗಳನ್ನು ಕಳೆದ 8 ತಿಂಗಳಿಂದ ಪ್ರತಿನಿತ್ಯ 600ಕ್ಕೆ ಇಳಿಸಲಾಗಿದೆ. ನಗರದ ಪ್ರತಿಷ್ಠಿತ ಆಚರಣೆಗಳಾದ ಕರಗ ಉತ್ಸವ, ದೀಪಾವಳಿ, ಗಣೇಶ ಚತುರ್ಥಿ, ನವರಾತ್ರಿ ಹಬ್ಬಗಳನ್ನು ಸರಳವಾಗಿ ಆಚರಿಸುವ ಮೂಲಕ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ತರಲಾಗಿದೆ. ಚಳಿಗಾಲದಲ್ಲಿ ಕೋವಿಡ್ ಸೋಂಕಿನ ಜೀವಿತಾವಧಿ ಹೆಚ್ಚಾಗಲಿದೆ. ಹೀಗಾಗಿ, ಹೊಸ ವರ್ಷದ ಆಚರಣೆಗೆ ಮುಕ್ತ ಅವಕಾಶ ನೀಡಿದಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಮಾರ್ಗಸೂಚಿ ಪಾಲನೆ ಅಗತ್ಯ: ಕೋವಿಡ್ ಲಾಕ್‌ಡೌನ್ ಸಡಿಲಿಕೆ ನಂತರ ಸರ್ಕಾರ ಆರ್ಥಿಕ ಚಟುವಟಿಕೆ ನಡೆಯುವ ಎಲ್ಲ ಸ್ಥಳಗಳಿಗೂ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದರಂತೆ, ಹೊಸ ವರ್ಷದಂದು ಹೋಟೆಲ್, ಕ್ಲಬ್-ಪಬ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಸ್ಯಾನಿಟೈಜಿಂಗ್, ವ್ಯಕ್ತಿಗತ ಅಂತರ, ದೇಹದ ಉಷ್ಣಾಂಶ ತಪಾಸಣೆ ಮಾಡುವ ಮೂಲಕ ಸಾಮಾನ್ಯ ದಿನಗಳಂತೆ ಕಾರ್ಯ ನಿರ್ವಹಿಸಬಹುದು. ಆದರೆ, ಹೊಸ ವರ್ಷದ ಆಷಚರಣೆಗೆ ವಿಶೇಷ ಟಿಕೆಟ್ ಮಾಡಿ ಕಾರ್ಯಕ್ರಮ ಆಯೋಜನೆ ಮಾಡುವ ಹಾಗೂ ರಾತ್ರಿ ಕರ್ಯ್ೂ ಜಾರಿ ಬಗ್ಗೆ ಸರ್ಕಾರದ ತೀರ್ಮಾನಕ್ಕೆ ಪಾಲಿಕೆ ಬದ್ಧವಾಗಿರುತ್ತದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದರು.

    3 ಕೋಟಿ ಖರ್ಚು ಮಾಡಿಸಿ ಮದ್ವೆಯಾದವ ಮೊದಲ ರಾತ್ರಿಯೇ ಫುಲ್ ಟೈಟ್! ಮುಂದೆ ಆಗಿದ್ದೆಲ್ಲವೂ…

    ಸರ್ಕಾರದ 2 ಲಕ್ಷ ರೂ. ಪರಿಹಾರ ಪಡೆಯಲು ಯಾರೂ ಇಲ್ಲ..! ಇದ್ದರೆ ದಯವಿಟ್ಟು ಸಂಪರ್ಕಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts