ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ ರಾಜ್ಯದಲ್ಲಿ ಶೈಕ್ಷಣಿಕ ವರ್ಷದ ಉಳಿದ ಭಾಗದಲ್ಲಿ ಶಾಲೆಗಳನ್ನು ಮುಚ್ಚಲು ಸ್ಥಳೀಯ ಸರ್ಕಾರ ನಿರ್ಧರಿಸಿದೆ. ಗವರ್ನರ್ ಆಂಡ್ರ್ಯೂ ಕ್ಯುಮೊ ಈ ಬಗ್ಗೆ ಶುಕ್ರವಾರ ಅಧಿಕೃತ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ 4.2 ದಶಲಕ್ಷ ವಿದ್ಯಾರ್ಥಿಗಳು ಇದ್ದಾರೆ. ಕರೊನಾ ಪಿಡುಗಿನಿಂದಾಗಿ ಇವರೆಲ್ಲರ ಶಾಲೆ-ಕಾಲೇಜುಗಳಿಗೆ ಮಾ.18ರಿಂದ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ತೆರೆಯುವುದು ಸುರಕ್ಷಿತವಲ್ಲ ಎಂಬ ಭಾವನೆಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಗವರ್ನರ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಲಾಕ್ಡೌನ್ ಸಮಯದಲ್ಲಿ ಸರ್ಕಾರದ ನಿರ್ದೇಶನ ಪಾಲಿಸದ ತಿರುಪತಿ ದೇಗುಲ ಮಂಡಳಿ, ಕಾರ್ಮಿಕ ಸಂಘಟನೆಗಳ ಆಕ್ರೋಶ
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮಾಸ್ಕ್ ಧರಿಸಿ ಶಾಲೆಗೆ ಬರುವ ಅನಿವಾರ್ಯತೆ ಇದೆ. ಸಾಮೂಹಿಕ ಪ್ರಾರ್ಥನೆ, ಆಟ-ಪಾಠಕ್ಕೆ ಅವಕಾಶವಿಲ್ಲದ ವಾತಾವರಣ ಇದೆ. ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳೊಂದಿಗೆ ಸಾರ್ವಜನಿಕ ಸಾರಿಗೆ ಕಾರ್ಯಾಚರಿಸಬೇಕಿದೆ. ಹೀಗಿರುವಾಗ ಉಳಿದಿರುವ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಆಟ, ಪಾಠಗಳನ್ನು ಹೇಗೆ ತಾನೆ ವ್ಯವಸ್ಥೆಗೊಳಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಶಾಲೆಗಳು ಮುಚ್ಚಿದ್ದರೂ ಮಕ್ಕಳಿಗೆ ಊಟ ಕೊಡುವ ಕಾರ್ಯಕ್ರಮ ಅಬಾಧಿತವಾಗಿ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ಅಗತ್ಯ ಸೇವೆಗಳಲ್ಲಿ ತೊಡಗಿರುವವ ಮಕ್ಕಳಿಗಾಗಿ ಚೈಲ್ಡ್ಕೇರ್ ಸೆಂಟರ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿರುವುದಾಗಿ ತಿಳಿಸಿದ್ದಾರೆ.
ಮೇ ಕೊನೆಯ ವಾರದಲ್ಲಿ ಬೇಸಿಗೆ ರಜಾವಧಿಯ ಕಾರ್ಯಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಸರ್ಕಾರ ಅವಕಾಶ ಕೊಟ್ಟಿದ್ದೇ ಸಾಕಾಯ್ತು; ಸ್ಪೇನ್ನ ಜನ ತಂಡೋಪತಂಡವಾಗಿ ಹೊರಬಂದರು…