More

    VIDEO | ಇಂಗ್ಲೆಂಡ್ ವಿರುದ್ಧ ಟೆಸ್ಟ್​ನಲ್ಲಿ 1 ರನ್​ ಅಂತರದಿಂದ ಗೆದ್ದು ಬೀಗಿದ ನ್ಯೂಜಿಲೆಂಡ್

    ವೆಲ್ಲಿಂಗ್ಟನ್: ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಒಂದು ರನ್​ಗಳ ಅಂತರದಿಂದ ಗೆದ್ದು ಬೀಗಿದೆ. ಇದರೊಂದಿಗೆ ಟೆಸ್ಟ್​​ ಕ್ರಿಕೆಟ್​ನಲ್ಲಿ ಒಂದು ರನ್​ಗಳ ಅಂತರದಿಂದ ಗೆದ್ದು ಬೀಗಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ನ್ಯೂಜಿಲೆಂಡ್ ಪಾತ್ರವಾಗಿದೆ.

    ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ಗೆಲುವಿಗೆ 258 ರನ್​ಗಳ ಗುರಿ ನೀಡಿತ್ತು. ಬೆನ್​ ಸ್ಟೋಕ್ಸ್ ಪಡೆ ನಾಲ್ಕನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿತ್ತು. ಆದರೆ ಟಿಮ್ ಸೌಥಿ ಪಡೆ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದು, ಇಂಗ್ಲೆಂಡ್ ತಂಡವನ್ನು 256 ರನ್​ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು.

    ಕೊನೆಯ ವಿಕೆಟ್​ಗೆ ಇಂಗ್ಲೆಂಡ್ ಗೆಲ್ಲಲು 7 ರನ್ ಬೇಕಾಗಿತ್ತು. ಆದರೆ ವ್ಯಾಗ್ನರ್ ಎಸೆತದಲ್ಲಿ ಎಡವಿದ ಜೇಮ್ಸ್ ಆ್ಯಂಡರ್ಸನ್ ಕೀಪರ್​ಗೆ ಕ್ಯಾಚ್ ನೀಡಿದರು. ಇದರೊಂದಿಗೆ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿಕೊಂಡಿತು.

    ಇದನ್ನೂ ಓದಿ: ರಶ್ಮಿಕಾ ಹೊಸ ಅವತಾರ; ಉರ್ಫಿ ಜಾವೇದ್ ಪ್ರಭಾವ ಎಂದ ನೆಟ್ಟಿಗರು!

    ಟೆಸ್ಟ್ ಕ್ರಿಕೆಟ್​​ನಲ್ಲಿ 26ನೇ ಶತಕ ಸಿಡಿಸಿದ ಮಾಜಿ ನಾಯಕ ಕೇನ್ ವಿಲಿಯಮ್ಸನ್ (132ರನ್) ದಿಟ್ಟ ಹೋರಾಟದ ನೆರವಿನಿಂದ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್​​ ಪಂದ್ಯದಲ್ಲಿ ತಿರುಗೇಟು ನೀಡಲು ಸಾಧ್ಯವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts