20.3 C
Bangalore
Sunday, December 15, 2019

VIDEO: ದುರ್ಗಾಪೂಜಾ ಥೀಮ್​ ಸಾಂಗ್​ಗೆ ಮನಮೋಹಕ ನೃತ್ಯ ಮಾಡಿದ ಟಿಎಂಸಿ​ ಸಂಸದೆಯರು; ಮತ್ತೊಮ್ಮೆ ಹಿಂದು ಸಂಸ್ಕೃತಿ ಬಿಂಬಿಸಿದ ನುಸ್ರತ್​ ಜಹಾನ್​…

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ ವಿಡಿಯೋವನ್ನು ಈಗಾಗಲೇ 1.5ಮಿಲಿಯನ್​ಗಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ.

ದುರ್ಗಾಪೂಜಾ ಪಶ್ಚಿಮಬಂಗಾಳದ ಪ್ರಸಿದ್ಧ ಹಬ್ಬ. ರಾಜ್ಯದೆಲ್ಲೆಡೆ ಹಬ್ಬ ಆಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್​ 4ರಿಂದ 8ರವರೆಗೆ ಪಶ್ಚಿಮಬಂಗಾಳದಲ್ಲಿ ದುರ್ಗಾಪೂಜೆ ನಡೆಯಲಿದ್ದು ಅದರ ಪ್ರಯುಕ್ತ ಥೀಮ್​ ಸಾಂಗ್​ ಮಾಡಲಾಗಿದೆ. ಟಿಎಂಟಿ ಬಾರ್​ ಕಂಪನಿಯ ಥೀಮ್​ ಸಾಂಗ್​ಗೆ ಇವರಿಬ್ಬರೂ ನೃತ್ಯ ಮಾಡಿದ್ದಾರೆ.

ಈ ಹಾಡನ್ನು ಟಾಲಿವುಡ್​ ಸಂಗೀತ ಸಂಯೋಜಕ ಇಂದ್ರದೀಪ್​ ದಾಸ್​ ಗುಪ್ತಾ ಸಂಯೋಜನೆ ಮಾಡಿದ್ದಾರೆ. ಕೋಲ್ಕತದ ಪ್ರಸಿದ್ಧ ಬೆಂಗಾಲಿ ಗಾಯಕ ರೂಪಾಂಕರ್​ ಬಾಗ್ಚಿ ಸೇರಿ ಭಾರತ ಮತ್ತು ಬಾಂಗ್ಲಾದೇಶದ ಹಲವು ಕಲಾವಿದರು ಹಾಡಿದ್ದಾರೆ. ಬಾಬಾ ಯಾದವ್​ ಎಂಬುವರು ನೃತ್ಯ ಸಂಯೋಜನೆ ಮಾಡಿದ್ದು ಪಶ್ಚಿಮ ಬಂಗಾಳದ ಪ್ರಸಿದ್ಧ ಸಾಂಪ್ರದಾಯಿಕ ಚೌ ನೃತ್ಯ ಮಾದರಿಯನ್ನೂ ಒಳಗೊಂಡಿದೆ.

ಈ ಇಬ್ಬರೂ ಸಂಸದೆಯರೂ ಮೂಲತಃ ಬೆಂಗಾಲಿ ಸಿನಿಮಾ ಇಂಡಸ್ಟ್ರಿಯಿಂದ ಬಂದವರು. ಇದೀಗ ಇನ್ನೋರ್ವ ಪ್ರಸಿದ್ಧ ನಟಿ ಸುಭಶ್ರೀ ಗಂಗೂಲಿಯವರ ಜತೆ ಸೇರಿ ದುರ್ಗಾಪೂಜಾ ಥೀಮ್ ಸಾಂಗ್​ಗೆ ಹೆಜ್ಜೆಹಾಕಿದ್ದಾರೆ.

ನುಸ್ರತ್ ಜಹಾನ್​ ಮುಸ್ಲಿಂ ಸಮುದಾಯದವರಾಗಿದ್ದರೂ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸುವಾಗ ತಾಳಿ ಹಾಕಿ, ಕುಂಕುಮ ಇಟ್ಟು ಬಂದು ಅವರದ್ದೇ ಧರ್ಮದ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೂ ಕಂಗೆಡದೆ ಪಶ್ಚಿಮ ಬಂಗಾಳದ ಹಲವು ಹಿಂದು ಸಂಸ್ಕೃತಿಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಾನು ನನ್ನ ಧರ್ಮವನ್ನು ಪ್ರೀತಿಸುತ್ತೇನೆ, ಉಳಿದ ಧರ್ಮವನ್ನೂ ಗೌರವಿಸುತ್ತೇನೆ ಎಂದು ಹೇಳಿದ್ದರು.
ಇದೀಗ ಈ ನೃತ್ಯದಲ್ಲೂ ಕೂಡ ಹಣೆಗೆ ದೊಡ್ಡದಾಗಿ ಕುಂಕುಮವನ್ನಿಟ್ಟು ಹಿಂದು ಸಂಪ್ರದಾಯವನ್ನು ಮೆರೆದಿದ್ದಾರೆ.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...