ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ವ್ಯಕ್ತಿ ಬಂಧನ

ಕೊಯಮತ್ತೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಆರೋಪದಡಿಯಲ್ಲಿ ನವವಿವಾಹಿತನೊಬ್ಬನನ್ನು ತಮಿಳುನಾಡಿನ ಕೊಯಮತ್ತೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿ ಪೇಯಿಂಟರ್​​ ಆಗಿದ್ದು, ಕಳೆದ ವಾರವಷ್ಟೇ ಮದುವೆಯಾಗಿದ್ದ. ಈತನ ಮೇಲೆ ಪೊಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಪದೇ ಪದೇ ಹೊಟ್ಟೆ ನೋವು ಬರುತ್ತಿದ್ದನ್ನು ಅಪ್ರಾಪ್ತೆ ಪೋಷಕರಿಗೆ ತಿಳಿಸಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪರಿಶೀಲನೆ ನಡೆಸಿದಾಗ ಆಕೆ ನಾಲ್ಕು ತಿಂಗಳ ಗರ್ಭಿಣಿ ಎನ್ನುವ ಸತ್ಯ ಬಹಿರಂಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತೆಯನ್ನು ಈ ಬಗ್ಗೆ ಪ್ರಶ್ನಿಸಿದಾಗ ತನ್ನ ನೆರೆಯವನಾಗಿದ್ದ ಪೇಯಿಂಟರ್​ ಮದುವೆಯಾಗುವುದಾಗಿ ಭರವಸೆ ನೀಡಿದ್ದಕ್ಕೆ ಆತನ ಜತೆ ದೈಹಿಕ ಸಂಪರ್ಕ ಹೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈ ಬಗ್ಗೆ ಪಾಲಕರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲು, ಆರೋಪಿಯನ್ನು ಪೋಕ್ಸೊ ಕಾಯಿದೆ ಅಡಿ ಬಂಧಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *