More

    ಕರೊನಾ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಸಿದ್ಧತೆ

    ಯಾದಗಿರಿ: ಕರೊನಾ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಜಿಲ್ಲೆಗೊಂದು ಕೋವಿಡ್-19 ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

    ಸೋಂಕು ಪರೀಕ್ಷೆ ಹೆಚ್ಚಿನ ಪ್ರಮಾಣದಲ್ಲಿ ನಡೆಸಲು ಸೂಚಿಸಿದ ಪ್ರಯುಕ್ತ ಹೊರವಲಯದಲ್ಲಿರುವ ಹೊಸ ಜಿಲ್ಲಾಸ್ಪತ್ರೆಯಲ್ಲಿ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಸಿದ್ಧತೆ ನಡೆದಿದೆ. ಪೂರ್ವಭಾವಿಯಾಗಿ ನಡೆಸುವ ಟ್ರೂನ್ಯಾಟ್ ಲ್ಯಾಬ್ ಸ್ಥಾಪನೆಗೂ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಲ್ಯಾಬ್ಗಳಿಗೆ ಅಗತ್ಯ ವೈದ್ಯಕೀಯ ಸಲಕರಣೆ ಸರ್ಕಾರದಿಂದ ಬರಬೇಕಿದೆ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ವೈರಸ್ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆ, ಭೀಮರಾಯನಗುಡಿ ಮತ್ತು ಸುರಪುರದಲ್ಲಿ ವ್ಯಕ್ತಿಗಳ ರಕ್ತ ಮತ್ತು ಕಫದ ಮಾದರಿ ಸಂಗ್ರಹಿಸಲಾಗುತ್ತಿದೆ. ಶಂಕಿತರಿಗಾಗಿ ನೂತನ ಜಿಲ್ಲಾಸ್ಪತ್ರೆಯಲ್ಲಿ 32 ಆಕ್ಸಿಜನ್ ಬೆಡ್ಗಳಿದ್ದು, ಇನ್ನೂ 100 ಬೆಡ್ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಶನಿವಾರದವರೆಗೆ ಪರೀಕ್ಷೆಗೆ ಕಳುಹಿಸಿದ್ದ ಮಾದರಿಗಳಲ್ಲಿ 1,451 ವರದಿ ನೆಗೆಟಿವ್ ಬಂದರೆ, 109ರ ವರದಿ ಬರಬೇಕಿದೆ. ಇದುವರೆಗೆ ಯಾವುದೇ ಖಚಿತ ಕರೊನಾ ಕೇಸ್ ದಾಖಲಾಗಿಲ್ಲ. ಜಿಲ್ಲಾಡಳಿತವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

    ಕೋವಿಡ್- 19 ಸಂಬಂಧ ಜಿಲ್ಲೆಯ ಎಲ್ಲ ಕುಟುಂಬಗಳ ಸಾರ್ವತ್ರಿಕ ಸಮೀಕ್ಷೆಯನ್ನು ಹೆಲ್ತ್ ವಾಚ್ ಆ್ಯಪ್ ಮೂಲಕ ಮತದಾರರ ಪಟ್ಟಿ ಪ್ರಕಾರ 12ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತ್ತು ಇವರಿಗೆ ಸಹಾಯಕರಾಗಿ ಹೆಚ್ಚುವರಿ ಶಿಕ್ಷಕರು ಹಾಗೂ ಆಶಾ ಕಾರ್ಯಕರ್ತೆಯರಿಂದ ನಡೆಸಲಾಗುವುದು. ಈ ಆರೋಗ್ಯ ಸಮೀಕ್ಷೆಗೆ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು ಎಂದು ಕೋರಿದರು.

    ಬೇರೆ ಜಿಲ್ಲೆಗಳಿಂದ ಯಾದಗಿರಿಗೆ ಮರಳುತ್ತಿರುವ ಕಾಮರ್ಿಕರ ಸೂಕ್ತ ತಪಾಸಣೆ ನಡೆಸಲಾಗುತ್ತಿದೆ. ಶನಿವಾರದವರೆಗೆ 363 ಬಸ್ಗಳಲ್ಲಿ ಬಂದವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿ ಮನೆಯಲ್ಲಿ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಇವರಿಗೆ ಸ್ಟ್ಯಾಂಪ್ ಕೂಡ ಹಾಕಲಾಗುತ್ತಿದೆ. ಇನ್ನು ಹೊರ ರಾಜ್ಯಗಳಿಂದ ಮರಳಿದವರನ್ನು ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತಿದೆ. ಸಕರ್ಾರದ ಮಾರ್ಗಸೂಚಿ ಅನ್ವಯ ಇವರ ರಕ್ತ ಮತ್ತು ಕಫದ ಮಾದರಿ ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದರು.

    ಜಿಲ್ಲಾದ್ಯಂತ ಬಿಪಿಎಲ್ ಮತ್ತು ಎಎವೈ ಕಾಡರ್್ ಹೊಂದಿದವರಿಗೆ 2 ತಿಂಗಳ ಆಹಾರಧಾನ್ಯವನ್ನು ಶೇ.91.78 ವಿತರಿಸಲಾಗಿದೆ. ಜಿಲ್ಲೆ ಜನತೆಗೆ ಅಗತ್ಯವಿರುವ ಸರಕು ಖರೀದಿಸಲು ಮಧ್ಯಾಹ್ನ 3ರವರೆಗೆ ಅವಕಾಶ ನೀಡಲಾಗಿದೆ. ಇನ್ನುಳಿದ ಅಂಗಡಿಗಳ ವಹಿವಾಟಿಗೂ ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಅವಕಾಶವಿದೆ. ಈ ಸಮಯದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸಿ ಪರಸ್ಪರ ಅಂತರ ಕಾಪಾಡುವುದು ಕಡ್ಡಾಯ ಎಂದು ಹೇಳಿದರು.

    ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಡಿಸಿ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಎಸ್. ಪಾಟೀಲ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts