1.12 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹ

GST
Published on

ನವದೆಹಲಿ: ಆಗಸ್ಟ್ ತಿಂಗಳಲ್ಲಿ 1.12 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದೆ. ಇದರಲ್ಲಿ 20, 522 ಕೋಟಿ ರೂ. ಸಿಜಿಎಸ್​ಟಿ, 26,605 ಎಸ್​ಗಿಎಸ್​ಟಿ, 56,247 ಐಜಿಎಸ್​ಟಿ ಸೇರಿದೆ.

ಕಳೆದ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ತೆರಿಗೆ ಸಂಗ್ರಹ ಶೇ. 30 ಏರಿಕೆ ಕಂಡಿದೆ. ದೇಶೀಯ ಒಟ್ಟಾರೆ ವಹಿವಾಟಿನಲ್ಲೂ ಶೇ. 27 ಏರಿಕೆ ಕಂಡುಬಂದಿದೆ. ಕಳೆದ 9 ತಿಂಗಳಿಂದ ಜಿಎಸ್​ಟಿ ಸಂಗ್ರಹ 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಸಂಗ್ರಹವಾಗುತ್ತಿದೆ. ಕರೊನಾ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹ ಮಾಸಿಕ 1 ಲಕ್ಷ ರೂ.ಗಿಂತ ಕೆಳಕ್ಕೆ ಕುಸಿದಿತ್ತು. ಬಳಿಕ ನಿರ್ಬಂಧ ತೆರವುಗೊಳಿಸಿದ ಬಳಿಕ ಏರಿಕೆ ಕಂಡಿತ್ತು. ಆರ್ಥಿಕ ಚೇತರಿಕೆ, ವಂಚನೆ ಪ್ರಕರಣಗಳಿಗೆ ಕಡಿವಾಣ, ನಕಲಿ ಬಿಲ್​ಗಳ ನಿಯಂತ್ರಣ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹ ಏರಿಕೆ ಕಾಣುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಶೇ. 35 ಏರಿಕೆ: ಕರ್ನಾಟಕದಲ್ಲಿ 7429 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದ್ದು, ಶೇ. 35 ಏರಿಕೆ ಕಂಡಿದೆ. ಕಳೆದ ವರ್ಷದ ಆಗಸ್ಟ್​ನಲ್ಲಿ 5502 ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 15,175 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net