ಈ ಲಾಂಛನಕ್ಕೆ 1.25 ಲಕ್ಷ ರೂ. ಬಹುಮಾನ!

kar sambhrama
Published on

ಬೆಂಗಳೂರು: ಕರ್ನಾಟಕ ಸಂಭ್ರಮ- 50 ಲಾಂಛನವನ್ನು ಬಿಡುಗಡೆ ಮಾಡುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಲಾಂಛನಗಳ ರಚನಾ ಸ್ಪರ್ಧೆಯನ್ನು ಸಾರ್ವಜನಿಕರಿಂದ ಆಹ್ವಾನಿಸಿತ್ತು.

270ಕ್ಕಿಂತ ಹೆಚ್ಚು ಮಂದಿ ತಮ್ಮ ರಚನೆ ಕಳಿಸಿದ್ದರು. ಈ ಪೈಕಿ ರವಿರಾಜ್.ಜಿ.ಹುಲಗೂರು ಅವರ ರಚನೆಯನ್ನು ಸರ್ಕಾರ ಅಂತಿಮವಾಗಿ ಆಯ್ಕೆ ಮಾಡಿಕೊಂಡಿದೆ. ಮಂಗಳವಾರ ವಿಧಾನಸಭೆಯಲ್ಲಿ ಇದನ್ನು ಬಿಡುಗಡೆ ಮಾಡಿದ ಸಿಎಂ ಸಿದ್ದಾರೆ, ಲಾಂಛನದ ವಿನ್ಯಾಸ ಉತ್ತಮವಾಗಿವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜತೆಗೆ ಕನ್ನಡ ಸಂಸ್ಕೃತಿ ಇಲಾಖೆಯಿಂದ 25 ಸಾವಿರ ರೂ. ನಗದು ಬಹುಮಾನದ ಚಕ್ ವಿತರಿಸಿದರು.

ಇದೇ ವೇಳೆ ಡಿ.ಕೆ ಶಿವಕುಮಾರ್ 1 ಲಕ್ಷ ಬಹುಮಾನ ಪ್ರಕಟಿಸಿದರು. ಈ ಲಾಂಛನ ಮಾಡಿದ ಹುಡುಗನಿಗೆ ಸಚಿವರು 25 ಸಾವಿರ ಬಹುಮಾನ ಮೊತ್ತ ಘೋಷಿಸಿದ್ದಾರೆ. ಆದರೆ 25 ಸಾವಿರದ ಕಾಲ ಹೋಯಿತು. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಾನು 1 ಲಕ್ಷವನ್ನು ಬಹುಮಾನವಾಗಿ ನೀಡುತ್ತೇನೆ. ಯುವಕರಿಗೆ ನಾವು ಪ್ರೋತ್ಸಾಹ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net