ಪ್ರತಿ ಗ್ರಾಮ ಪಂಚಾಯಿತಿಗೆ 1.5 ಕೋಟಿ ರೂ. ಅನುದಾನ

ashwathanarayan
Published on

ರಾಮನಗರ: ಆಡಳಿತ ವಿಕೇಂದ್ರೀಕರಣವನ್ನು ಮತ್ತಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಪ್ರತಿ ಗ್ರಾಮ ಪಂಚಾಯಿತಿಗೂ ವರ್ಷಕ್ಕೆ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್​. ಅಶ್ವತ್ಥನಾರಾಯಣ ಪ್ರಕಟಿಸಿದರು.

ರಾಮನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಡಿಸಿಎಂ, 15ನೇ ಹಣಕಾಸು ಆಯೋಗದ ವರದಿಯಲ್ಲಿ ಗ್ರಾಪಂಗಳಿಗೆ ನೇರವಾಗಿ ಹೆಚ್ಚು ಅನುದಾನ ನೀಡುವ ಅಂಶವಿದೆ. ಅದರಂತೆ, ಗ್ರಾಮೀಣಾಭಿವೃದ್ಧಿಗೆ ಬೇಕಾದ ಎಲ್ಲ ಹಣಕಾಸು ಒದಗಿಸಲಾಗುವುದು. ಜತೆಗೆ, ಆಯಾ ಗ್ರಾಮಗಳ ಯೋಜನೆಗಳ ಅನುಷ್ಠಾನದ ಹೊಣೆಯನ್ನು ಜಿಲ್ಲಾ ಪಂಚಾಯಿತಿಯಿಂದ ಗ್ರಾಪಂಗಳಿಗೆ ವಹಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net