

ಲಖನೌ: ಯುವತಿಯೊಂದಿಗೆ ಸ್ನೇಹ ಬೆಳೆಸಲು ಗುರುತು ಮರೆಮಾಚಿ ಆಕೆಯನ್ನು ಮತಂತಾರ ಮಾಡಿರುವ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
24 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಅಬಿದ್ ಈ ಮೊದಲು ಅಂಕಿತ್ ಎಂದು ಪರಿಚಯಿಸಿಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ಅಬಿದ್ ಎಂಬ ವ್ಯಕ್ತಿಯೂ ತನ್ನನ್ನು ತಾನು ದೂರುದಾರ ಯುವತಿ ಬಳಿ ಅಂಕಿತ್ ಎಂದು ಪರಿಚಯಿಸಿಕೊಂಡು ಸ್ನೇಹ ಬೆಳೆಸಿದ್ದಾನೆ. ದಿನಕಳೆದಂತೆ ಆಕೆಯ ವಿಶ್ವಾಸ ಗಳಿಸಿದ ಆರೋಪಿಯೂ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.
ಕೆಲ ದಿನಗಳ ಬಳಿಕ ಆರೋಪಿಯೂ ತನ್ನೊಂದಿಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋವನ್ನು ಇಂಟರ್ನೆಟ್ನಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿ ಯುವತಿಯನ್ನು ವಿವಾಹವಾಗಿದ್ದಾನೆ. ಮದುವೆಯಾದ ಬಳಿಕ ಅಬಿದ್ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿಸಿ ಮಾಂಸಹಾರವನ್ನು ತಿನ್ನಿಸಿದ್ದಾನೆ. ಬಳಿಕ ಆತನ ತಂದೆಯ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಆಕೆಗೆ ಪೀಡಿಸಿದ್ಧಾನೆ.
ಇದಕ್ಕೊಪ್ಪದಿದ್ದಾಗ ಆಕೆಯನ್ನು ಅಬಿದ್ ಕುಟುಂಬಸ್ಥರು ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ದುರುದಾರ ಯುವತಿ ಅಲ್ಲಿದ್ದವರ ಕಣ್ಣು ತಪ್ಪಿಸಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.
ಮಹಿಳೆ ನೀಡಿರುವ ಹೇಳಿಕೆ ಆಧಾರದ ಮೇಲೆ ಆರೋಪಿಗಳ ವಿರುದ್ಧ ಉತ್ತರಪ್ರದೇಶ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಡು ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ತಿಳಿಸಿದ್ದಾರೆ.