ಅಶ್ಲೀಲ ವಿಡಿಯೋ ಕಳುಹಿಸಿದ ಅಪರಾಧಿಗೆ 1 ತಿಂಗಳು ಜೈಲು

court
Published on

ಬೆಂಗಳೂರು: ಇ-ಮೇಲ್‌ನಲ್ಲಿ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ ನೀಡಿದ ಅಪರಾಧಿಗೆ 1 ತಿಂಗಳು ಸಾದಾ ಶಿಕ್ಷೆ, 45 ಸಾವಿರ ರೂ. ದಂಡ ವಿಧಿಸಿ 1ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯ ತೀರ್ಪು ನೀಡಿದೆ.

ಸುಬ್ರಹ್ಮಣ್ಯನಗರ ನಿವಾಸಿ ರಾಘವನ್ ಸಂಪತ್ ಶಿಕ್ಷೆಗೆ ಒಳಗಾದವ. ಸಂತ್ರಸ್ತೆಗೆ ಇ-ಮೇಲ್ ಮುಖಾಂತರ ಅಶ್ಲೀಲ ವಿಡಿಯೋವನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ. ನೊಂದ ಸಂತ್ರಸ್ತೆ ಸಿಐಡಿ ಘಟಕದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಇದರ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು, ಅಪರಾಧಿಯನ್ನು ಬಂಧಿಸಿ ತನಿಖೆ ಪೂರ್ಣಗೊಳಿಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. 1ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯ, ವಾದ-ಪ್ರತಿವಾದ ಆಲಿಸಿ ಅಪರಾಧಿ ರಾಘವನ್ ಅಪರಾಧಿ ಎಂದು ೋಷಿಸಿ ಶಿಕ್ಷೆ ವಿಧಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net