ಮದುವೆಮನೆಯಲ್ಲಿ ಆಹಾರ ಸೇವಿಸಿ ಆಸ್ಪತ್ರೆ ಸೇರಿದ 10 ಮಂದಿ ಬಾಲಕರು

hospital
Published on

ಲಖನೌ: ಮದುವೆ ಮನೆಯಲ್ಲಿ ಆಹಾರ ಸೇವಿಸಿದ ನಂತರ ಹೊಟ್ಟೆನೋವು ಹಾಗೂ ವಾಂತಿಯ ಕಾರಣದಿಂದಾಗಿ 10 ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರಪ್ರದೇಶದ ಬುದೌನ್​ನಲ್ಲಿ ಘಟನೆ ನಡೆದಿದ್ದು ಫುಡ್​ ಪಾಯ್ಸನಿಂಗ್​ ಆಗಿರಬಹುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಶಂಕಿಸಿದ್ದಾರೆ.

Food poison

ವಿಷಹಾರ ಸೇವನೆ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಮತ್ತು ಆಹಾರವನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.

ಘಟನೆ ಕುರಿತು ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net