

ಮುಂಬೈ: ಎರಡು ಪ್ರತ್ಯೆಕ ಅಪಘಾತ ಪ್ರಕರಣಗಳಲ್ಲಿ 10 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಹಾಗೂ ಬೀಡ್ ಜಿಲ್ಲೆಯಲ್ಲಿ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮುಂಬೈನಿಂಡ ಬೀಡ್ನತ್ತ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಒಂದು ಗುರುವಾರ ಬೆಳಗಿನ ಜಾವ 6 ಘಂಟೆ ಸುಮಾರಿಗೆ ಅಷ್ಟಾ ಫಟಾ ಬಳಿ ವಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಬಸ್ಸಿನಲ್ಲಿ 40-45 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಧೋಂಡಿಬಾ ಶಿಂಧೆ, ದಿಯೋದತ್ ಪೇಚೆ, ಮೊಹಮ್ಮದ್ ಆಸಿಫ್, ದೋಸ್ತ್ ಮೊಹಮ್ಮದ್ ಖಾನ್, ಅಶೋಕ್ ಭೋಂಡ್ವೆ ಮತ್ತು ರವಿ ಗೊಡಂಬೆ ಎಂದು ಗುರುತಿಸಲಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡುವಂತಗೆ ವೈದ್ಯರಿಗೆ ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವೈದ್ಯ ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯಲ್ಲಿ ನಡೆದಿದೆ. ಅಪಘಾತಕ್ಕೀಢಾದ ಅಂಬುಲೆನ್ಸ್ ಅಹ್ಮದ್‌ನಗರ ಕಡೆಗೆ ಹೋಗುತ್ತಿತ್ತು. ಚಾಲಕ ಮತ್ತು ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಮೃತರನ್ನು ಡಾ.ರಾಜೇಶ್ ಜಿಂಜುರ್ಕೆ (35), ಅಂಬ್ಯುಲೆನ್ಸ್ ಚಾಲಕ ಭರತ್ ಲೋಖಂಡೆ (35), ಪಪ್ಪು ತಿರ್ಖುಂಡೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮೃತದೇಹಗಳನ್ನು ಮರಣೊತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.