ಕಾರಿಗೆ ಟ್ರಕ್​ ಡಿಕ್ಕಿ; ಮೂವರು ಮಕ್ಕಳ ಸಮೇತ 10 ಮಂದಿ ಸಾವು

Chhattisgarh Tragedy
Published on

ಛತ್ತೀಸ್​ಗಢ: ಛತ್ತೀಸ್‌ಗಢದ ಬೆಮೆತಾರಾದಲ್ಲಿ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 10ಮಂದಿ ಪ್ರಾಣಬಿಟ್ಟಿದ್ದಾರೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 ಮೃತರನ್ನು ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿ ಸಾಹು (60), ಖುಷ್ಬೂ ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್ ಎಂದು ಗುರುತಿಸಲಾಗಿದೆ.

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್​ ಒಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 23 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯ್‌ಪುರ ಏಮ್ಸ್‌ಗೆ ದಾಖಲಿಸಲಾಗಿದೆ.

ಕುಟುಂಬದ ಕಾರ್ಯಕ್ರಮದ ನಿಮಿತ್ತ ಹಲವು ಮಂದಿ ಟ್ರಕ್​ನಲ್ಲಿ ಹೋಗುತ್ತಿದ್ದರು, ಇದು ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಯ್‌ಪುರ ಏಮ್ಸ್‌ಗೆ ದಾಖಲಿಸಲಾಗಿದೆ. ಛತ್ತೀಸ್‌ಗಢದ ಬೆಮೆತಾರಾ ಸಮೀಪದ ಕಥಿಯಾ ಗ್ರಾಮದ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net