ಮಂಗಳೂರು: ನಗರದ ಪಂಪ್ ವೆಲ್ ಬಳಿ ಭಾನುವಾರ ಬೆಳಗ್ಗೆ ಮಿನು ಸಾಗಾಟದ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಟನ್ ದನದ ಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಮಾಡಿ ಪೊಲೀಸರಿಗೊಪ್ಪಿಸಿದ್ದಾರೆ.
ಮಂಗಳೂರಿನಲ್ಲಿ ದನದ ಅಕ್ರಮ ಸಾಗಾಟ ವ್ಯಾಪಕವಾಗಿ ಸಾಗಾಟ ನಡೆಯುತ್ತಿರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದರು. ಎಲ್ಲ ಕಡೆ ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿ ನೇಮಕ ಮಾಡಿದ್ದರು. ಆದರೂ ಅಕ್ರಮ ಸಾಗಾಟ ನಡೆಯುತ್ತಿತ್ತು. ಐದು ದಿನಗಳ ಹಿಂದೆಯೂ ಮೀನು ಸಾಗಾಟ ವಾಹನದಲ್ಲಿ ದನದ ಮಾಂಸ ಸಾಗಾಟವನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಮಾಡಿದ್ದರು.