

ಥಾಣೆ: ರೇವ್ ಪಾರ್ಟಿಯ ಮೇಲೆ ಏಕಾಏಕಿ ದಾಳಿ ನಡೆಸಿದ ಪೊಲೀಸರು, ಡ್ರಗ್ಸ್ ಸೇವಿಸಿದ ಶಂಕೆಯ ಮೇಲೆ ಸುಮಾರು 100 ಜನರನ್ನು ಬಂಧಿಸಿದ್ದು, ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ.
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಈ ದಾಳಿ ನಡೆಸಲಾಗಿದೆ. ಬಂಧಿತರಲ್ಲಿ ಪಾರ್ಟಿಯನ್ನು ಸಂಘಟಿಸಿದ ಇಬ್ಬರು ಕೂಡ ಸೇರಿದ್ದಾರೆ. ಥಾಣೆ ಪೊಲೀಸ್ನ ಕ್ರೈಂ ಬ್ರಾಂಚ್ ಘಟಕವು ತಡರಾತ್ರಿಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದು, ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಆರಂಭಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ, ಅಧಿಕಾರಿಗಳು ಈವೆಂಟ್ನಲ್ಲಿ ಮಾದಕವಸ್ತು ಸೇವನೆಯನ್ನು ಸೂಚಿಸುವ ಎಲ್ಎಸ್ಡಿ, ಗಾಂಜಾ ಸೇರಿದಂತೆ ವಿವಿಧ ಅಕ್ರಮ ವಸ್ತುಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ನಡೆಯುತ್ತಿರುವ ತನಿಖೆಯ ಭಾಗವಾಗಿ, ಮಾದಕವಸ್ತು ಸೇವನೆಯ ಆರೋಪಗಳನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಬಂಧಿತ ವ್ಯಕ್ತಿಗಳ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ,(ಏಜೆನ್ಸೀಸ್).