ಮದ್ವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ!

Food
Published on

ವಿಜಯವಾಡ: ಮನೆಗೆ ಬಂದ ಅಳಿಯನಿಗೆ ಅತ್ತೆ-ಮಾವಂದಿರು ವಿಶೇಷ ಮನ್ನಣೆ ನೀಡುವುದು ಸಾಮಾನ್ಯ ಸಂಗತಿ. ಆದರೆ, ಆಂಧ್ರಪ್ರದೇಶದಲ್ಲಿ ಬಹಳ ಹಿಂದಿನಿಂದ ಒಂದು ವಿಶೇಷ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಅದೇನೆಂದರೆ, ಮದುವೆಯಾಗಿ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ವಿವಿಧ ಬಗೆಯ ಭಕ್ಷ್ಯಗಳನ್ನು ತಯಾರಿಸಿ ಉಣಬಡಿಸುವುದು.

ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಇಂತಹ ಆಚರಣೆಗಳು ಹೆಚ್ಚಾಗಿ ಕಂಡುಬರುತ್ತವೆ. ಇದೀಗ ಕಾಕಿನಾಡದಲ್ಲಿ ಮನೆಗೆ ಬಂದ ಹೊಸ ಅಳಿಯನಿಗೆ ಅತ್ತೆ 100 ಬಗೆಯ ಖಾದ್ಯಗಳನ್ನು ತಯಾರಿಸಿ ಬಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ವಿವರಣೆಗೆ ಬರುವುದಾದರೆ, ಕಾಕಿನಾಡ ಜಿಲ್ಲೆಯ ಕಿರ್ಲಂಪುಡಿ ಮಂಡಲದ ತಾಮರದ ಗ್ರಾಮದ ರತ್ನಕುಮಾರಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕಾಕಿನಾಡ ನಗರದ ರವಿತೇಜ ಅವರನ್ನು ವಿವಾಹವಾಗಿದ್ದರು. ಆದರೆ, ಮದುವೆಯ ನಂತರ ಆಷಾಢ ಮಾಸ ಮುಗಿದು ಅಳಿಯ ಮೊದಲಬಾರಿಗೆ ಅತ್ತೆಯ ಮನೆಗೆ ಬಂದಾಗ ಅತ್ತೆಯು ತನ್ನ ಅಳಿಯನಿಗೆ ಭರ್ಜರಿ ಊಟವನ್ನು ಸಿದ್ಧಪಡಿಸಿದರು.

ಬರೋಬ್ಬರಿ ನೂರು ಬಗೆಯ ತಿನಿಸುಗಳನ್ನು ಅಳಿಯನ ಮುಂದೆ ಉಣಬಡಿಸಲಾಗಿತ್ತು. ತನ್ನ ಮುಂದೆ ವಿವಿಧ ಖಾದ್ಯಗಳನ್ನು ನೋಡಿದ ಅಳಿಯ ಯಾವುದನ್ನು ತಿನ್ನುವುದು ಮತ್ತು ಯಾವುದನ್ನು ಬಿಡುವುದು ಎಂಬ ಗೊಂದಲಕ್ಕೆ ಒಳಗಾದರು. ಅಲ್ಲದೆ, ತನ್ನ ಅತ್ತೆ ತನಗಾಗಿ ವಿವಿಧ ಬಗೆಯ ಅಡುವೆ ಮಾಡಿದಕ್ಕೆ ಹರ್ಷ ವ್ಯಕ್ತಪಡಿಸಿದರು. ಇದೀಗ ಈ ಘಟನೆಯ ವಿಡಿಯೋ ವೈರಲ್ ಆಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net